ಗದಗ – ಬೆಟಗೇರಿ ನಗರಸಭೆಯ ಪೌರಾಯುಕ್ತರಾದ ರಮೇಶ್.ಎಸ್.ಸುಣಗಾರ ಸೇವಾನಿವೃತ್ತಿಯ ನಿಮಿತ್ಯ ಸನ್ಮಾನ.
ಗದಗ ಸೆಪ್ಟೆಂಬರ್.1

ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತರಾದ ರಮೇಶ ಎಸ್. ಸುಣಗಾರ ಅವರು ದಿ. 31-08-2023 ರಂದು ಸೇವಾ ನಿವೃತ್ತಿಯಾದ ಪ್ರಯುಕ್ತ ಇಂದು ಅವರನ್ನು ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಗದಗ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಪರಸಪ್ಪ ಪರಾಪೂರ ಅವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಶ್ರೀ ಶಿವಶರಣ ಮಾದರ ಚನ್ನಯ್ಯನವರ ಭಾವಚಿತ್ರ ನೀಡಿ ಸನ್ಮಾನಿಸಿ ಮಾತನಾಡಿದ ಅವರು ಪೌರಾಯುಕ್ತರಾದ ರಮೇಶ ಸರ್ ಅವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಶುಭ ಕೋರಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತರಾಗಿ ಅಧಿಕಾರದ ಅವಧಿಯಲ್ಲಿ ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನನ್ನಿಂದ ಯಾವುದೇ ತಪ್ಪಾಗಿದ್ದರೂ ಕೂಡ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹೇಳಿದರು.ಈ ಸಂದರ್ಭದಲ್ಲಿ ರಾ. ದೇ. ಕಾರಭಾರಿ, ಶ್ರೀಮತಿ ಮೇರಿ ರಾ. ಕಾರಭಾರಿ ಸೇರಿದಂತೆ ನಗರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ರಾಘವೇಂದ್ರ ಪಿ, ಪರಾಪೂರ
ಮೋ:98801 61018