ಉದ್ಯೋಗ ಸೃಷ್ಟಿಸುವ ಬದಲು ಖಾಸಗೀಕರಣಕ್ಕೆ ಮಣೆ.
ಹೊಸಪೇಟೆ ಆ.25

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಆದರೆ ಸರ್ಕಾರಗಳು ಮಾತ್ರ ಉದ್ಯೋಗ ಸೃಷ್ಟಿಸುವ ಬದಲು ಖಾಸಗೀಕರಣಕ್ಕೆ ಮಣೆ ಹಾಕುತ್ತಿವೆ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಡಿವೈಎಫ್‌ಐನ ರಾಷ್ಟ್ರೀಯ ಅಧ್ಯಕ್ಷ ಎ.ಎ.ರಹೀಮ್ ಆತಂಕ ವ್ಯಕ್ತಪಡಿಸಿದರು.24/08/2023 ರಂದು ಉಮರ್ ಫಂಕ್ಷನ್ ಹಾಲ್ ನಲ್ಲಿ ಶನಿವಾರ ಶಿಕ್ಷಣ, ಉದ್ಯೋಗ, ಆರೋಗ್ಯ ರಕ್ಷಣೆಯ ಹಕ್ಕಿಗಾಗಿ ಡಿವೈಎಫ್‌ಐ ಹಮ್ಮಿಕೊಂಡಿದ್ದ ರಾಜ್ಯ ಸಂಘಟನಾ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಅವರುದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ, ಉದ್ಯೋಗ ನೀಡದೇ, ಇರೋ ಉದ್ಯೋಗವನ್ನು ಕಿತ್ತುಕೊಂಡಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುವ ಬದಲು ಖಾಸಗಿ ಬಂಡವಾಳ ಶಾಯಿಗಳಿಗೆ ಮಣೆ ಹಾಕಿ ಎಲ್ಲಾ ಸರ್ಕಾರಿ ಸಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿವೆ. ಇದರ ಉದ್ದೇಶ ಮೀಸಲಾತಿ ತೆಗೆಯುವುದೇ ಆಗಿದೆ ಎಂದರು.ಪ.ಜಾ/ಪ.ಪಂ. ಮತ್ತು ಹಿಂದುಳಿದ ವರ್ಗಗಳಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಪ್ರಜಾಪ್ರಭುತ್ವವವನ್ನು ಪ್ರಶ್ನೆ ಮಾಡುವ ಹಕ್ಕನ್ನು ಯುವಕರಿಂದ ಕಿತ್ತುಕೊಂಡು ಅವರನ್ನು ಜಾತಿ, ಧರ್ಮದ ನಶೆ ಏರಿಸಿ, ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಯುವಕರು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡುವ ಮಟ್ಟಕ್ಕೆ ಜಾಗೃತ ಗೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘಟನೆಯು ಇಡೀ ರಾಜ್ಯದ್ಯಾಂತ ಬಲಿಷ್ಠವಾಗಿ ಬೆಳೆಯಬೇಕು ಎಂದು ಕರೆ ನೀಡಿದರು.ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವುದರ ವಿರುದ್ಧ ಈ ಹಿಂದೆ ಸಂಘಟಿತವಾಗಿ ಹೋರಾಟ ನಡೆಸಲಾಗಿತ್ತು. ಇದೀಗ ಮತ್ತೆ ಅಂಥದ್ದೇ ಹೋರಾಟದ ಅಗತ್ಯ ಎದುರಾಗಿದೆ. ಈ ಹಿಂದೆ ಭೂಮಿ ಮಾರಾಟಕ್ಕೆ ವಿರೋಧಿಸಿದ್ದ ಕಾಂಗ್ರೆಸ್ ಇದೀಗ ಉಲ್ಟಾ ಹೊಡೆದಿದೆ. ಮೂರೂ ಪಕ್ಷಗಳು ಒಂದೇ ಎಂಬುದನ್ನು ಇದು ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.ರಾಜ್ಯ ಅಧ್ಯಕ್ಷ ಲವಿತ್ರ ವಸ್ತ್ರದ್, ಕಾರ್ಯದರ್ಶಿ ಬಸವರಾಜ್ ಪೂಜಾರ್, ಮಾಜಿ ರಾಜ್ಯಾಧ್ಯಕ್ಷ ಮುನೀರ ಕಾಟಿಪಳ್ಳ, ಜಿಲ್ಲಾಧ್ಯಕ್ಷ ವಿ.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ, ಬಂಡೆ ತಿರುಕಪ್ಪ, ಮರಡಿ ಜಂಬಯ್ಯ ನಾಯಕ, ಎ. ಕರುಣಾನಿಧಿ, ಕೆ.ನಾಗರತ್ನಮ್ಮ, ಕೆ.ಎಂ.ಸ್ವಪ್ನ, ವೆಂಕಟೇಶ್, ಮಹೇಶ್ ಬಿಸಾಟಿ, ಸಂತೋಷ್ ಡಿ.ವೈ.ಎಫ್.ಐ ಮುಖಂಡರುಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ.