ಅವಳಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿದ – ಡಿಸಿ. ಸಿಇಓ.
ಹುನಗುಂದ ಸಪ್ಟೆಂಬರ್.28

ಬಾಗಲಕೋಟ ಜಿಲ್ಲೆಯ ಟೆಹುನಗುಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರ ಅಧ್ಯಕ್ಷತೆಯಲ್ಲಿ ಹುನಗುಂದ ಹಾಗೂ ಇಳಕಲ್ಲ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಜರುಗಿತು.ಕುಡಿಯುವ ನೀರು, ಜಲ ಜೀವನ ಮಿಷನ್, ಬರ ನಿರ್ವಹಣೆ ಹಾಗೂ ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಬಳಿಕ ಇಲ್ಲಕಲ ತಾಲೂಕಿನ ಗ್ರಾಮ ಹಿರೇಕೂಡಗಲಿ ಭೇಟಿ ನೀಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಲ ಜೀವನ ಮಿಷನ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಜೊತೆಗೆ ಹುನಗುಂದ ತಾಲೂಕು ಆಸ್ಪತ್ರೆಗೆ ಹಾಗೂ ಹಾಸ್ಟೆಲ್ ಗಳಿಗೆ ಗುಣಮಟ್ಟ ಕಾಪಾಡಿಕೊಳ್ಳಲು ಸೂಚಿಸಿದರು. ಈ ಸಂದರ್ಭದಲ್ಲಿ ವಿಭಾಗ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಜಿಪಂ ಸಹಾಯಕ ಯೋಜನಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಐಇಸಿ ಸಂಯೋಜಕರು, ಸಹಾಯಕ ನಿರ್ದೇಶಕರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.