ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಭೆ ನಡೆಯಿತು.
ಚಿಕ್ಕಮಗಳೂರು ಸಪ್ಟೆಂಬರ್.30

ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಿನಾಂಕ 30-.09.-2023 ರಂದು ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮತ್ತು ಸಪಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯಲ್ಲಿ ಸದಸ್ಯರಾದ ತರೀಕೆರೆ ಏನ್ ವೆಂಕಟೇಶ್ ರವರು ಚಿಕ್ಕಮಗಳೂರು ನಗರಸಭೆ ಪೌರ ಕಾರ್ಮಿಕರು,

ಕಡೂರು,ತರೀಕೆರೆ, ಬೀರೂರು ಪುರಸಭೆ, ಅಜ್ಜಂಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹ ರಾಜಪುರ, ಪಟ್ಟಣ ಪಂಚಾಯಿತಿ, ಹಾಗೂ ಲಕ್ಕವಳ್ಳಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಕುರಿತು ಮತ್ತು ಗೃಹ ಭಾಗ್ಯ ಯೋಜನೆಯಲ್ಲಿ ಮನೆಯನ್ನು ಕೊಡಿಸಿ ಕೊಡುವ ಬಗ್ಗೆ, ಹಾಗೂ ಇಎಸ್ಐ ಕಾರ್ಡ್ ಕೊಡಿಸಿ ಕೊಡಬೇಕೆಂದು ಮತ್ತು ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ನಿರ್ಮಿಸಿ ಕೂಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ