ಕೊಟ್ಟೂರೇಶ್ವರ ಕಾಲೇಜಿನ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆ.
ಕೊಟ್ಟೂರು ಅಕ್ಟೋಬರ್.1

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಶ್ರೀ ಗುರು ಕೊಟ್ಟೂರೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಹರಪನಹಳ್ಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಖೋ ಖೋ ಪಂದ್ಯ ಆಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ನಾಲ್ಕು ವಿದ್ಯಾರ್ಥಿಗಳು ವಿನಯ್. ರಮೇಶ್. ಶರತ್. ವಿನಯ್ ಆರ್. ಆಯ್ಕೆಯಾಗಿದ್ದಾರೆ ಹಾಗೂ ತ್ರಿವಿಧ ಜಿಗಿತದಲ್ಲಿ ಪುನೀತ್ ಎನ್ ಪ್ರಥಮ ಸ್ಥಾನ ಪಡೆದು ಎಸೆತದಲ್ಲಿ ವಿನೋದ್ ನಾಯಕ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಒಂದು ಸಂದರ್ಭದಲ್ಲಿ ಶ್ರೀ ಗುರು ಕೊಟ್ಟೂರೇಶ್ವರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ಧರಾಮ ಕಲ್ಮಠ ಪ್ರಾಚಾರ್ಯರಾದ ಎಂ ರವಿಕುಮಾರ್ ಪದವಿಪೂರ್ವ ಕಾಲೇಜ್ ಪ್ರಾಚಾರ್ಯರಾದ ಎಂ ಎಚ್ ಪ್ರಶಾಂತ್ ಕುಮಾರ್ ದೈಹಿಕ ನಿರ್ದೇಶಕರಾದ ಬಸವರಾಜ್ ಆಡಳಿತ ಮಂಡಳಿ ಎಲ್ಲಾ ಸದಸ್ಯರುಗಳು ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.C ಕೊಟ್ಟೂರು