ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಸಾಲುಮನಿ ರಾಘವೇಂದ್ರ ಆಯ್ಕೆ.
ಕೂಡ್ಲಿಗಿ ಅಕ್ಟೋಬರ್.4

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಕೂಡ್ಲಿಗಿ ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡುವ ಕುರಿತು ಸಭೆಯನ್ನು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಸಮ್ಮುಖದಲ್ಲಿ ಸಭೆಯನ್ನು ಕರೆಯಲಾಯಿತು. ಈ ಸಭೆಯಲ್ಲಿ ಕೂಡ್ಲಿಗಿ ತಾಲೂಕಿನ ಕರ್ನಾಟಕದ ಸಂಘದ ಎಲ್ಲಾ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರು ಒಮ್ಮತದಿಂದ ಕರ್ನಾಟಕ ಪತ್ರಕರ್ತ ಸಂಘದ ತಾಲೂಕು ಅಧ್ಯಕ್ಷರನ್ನಾಗಿ ಸಾಲುಮನಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ವೇಳೆ ನೂತನ ಅಧ್ಯಕ್ಷ ಸಾಲುಮನಿ ರಾಘವೇಂದ್ರ ಮಾತನಾಡಿ ಈ ಸಂಘದಲ್ಲಿ ನನಗೆ ಕೊಟ್ಟಂತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ. ಏನೇ ಬಂದರು ನಾವೆಲ್ಲರೂ ನಮ್ಮ ಸಂಘದ ವತಿಯಿಂದ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಮಿಟಿ ಸದಸ್ಯರಾದ ಡಿ.ಎಂ ಈಶ್ವರಪ್ಪ, ಮುರಳಿಧರ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ತಾಲೂಕು ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಮೀನಕೆರೆ, ತಾಲೂಕು ಪ್ರಧಾನ ಕಾರ್ಯದರ್ಶಿ ಲಿಂಬ್ಯಾ ನಾಯ್ಕ್ ಜೆ, ಉಪಾಧ್ಯಕ್ಷರಾಗಿ ಬಸವರಾಜಸ್ವಾಮಿ, ಕಾರ್ಯಧ್ಯಕ್ಷರಾಗಿ ಗುನ್ನಳ್ಳಿ ರಾಘವೇಂದ್ರ, ಸದಸ್ಯರಾದ ಹೊನ್ನೂರಪ್ಪ, ಭಾಗ್ಯಮ್ಮ ಸೇರಿದಂತೆ ಇತರೆ ಪತ್ರಕರ್ತರು ಇದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು

