ಚಿರಿಬಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ.
ಚಿರಿಬಿ ಅಕ್ಟೋಬರ್.13

ಕೊಟ್ಟೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಎರಡನೇ ಅವಧಿಯ ಚುನಾವಣೆಯಲ್ಲಿ ಚಿರಬಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆ ರೇಖಾ ಓಬಳೇಶ್ ಜಾಗಟಗೇರಿ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಎಸ್ ಗಂಗಾಧರ ಇವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.ಚಿರಬಿ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಚುನಾವಣೆಯ ಅಧಿಕಾರಿಯಾಗಿ ವಿಜಯಕುಮಾರ ಹೊಳಗುಂದಿ ಸಹಾಯಕ ನಿರ್ದೇಶಕರ ನೇತೃತ್ವದಲ್ಲಿ ನೆರವೇರಿಸಲಾಗಿತ್ತು ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಉಮಾಪತಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಗಂಗಮ್ಮನಹಳ್ಳಿ ಪಿ ನಾಗರಾಜ್,ಪ್ರಕಾಶ್ ವಕೀಲರು, ಸ್ವಾಮಿ, ಗಂಗಮ್ಮನಹಳ್ಳಿ ಬಸವರಾಜ ಇನ್ನೂ ಮುಂತಾದ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ಪೊಲೀಸ್ ಸಿಬ್ಬಂದಿ ಸಹಾಯ ಮೂಲಕ ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ಆವಿರೋಧ ಆಯ್ಕೆ ಪ್ರಕ್ರಿಯೆ ನೆರವೇರಿಸಲಾಯಿತು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು