ಗುಡೇಕೋಟೆಗೆ ನಾಳೆ ಕಾಂತಾರ ಚಿತ್ರದ ನಿರ್ದೇಶಕ ನಟ ರಿಷಬ್ ಶೆಟ್ಟಿ ಆಗಮನ.
ಗುಡೇಕೋಟೆಗೆ ಜೂನ್.18

ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಇದೇ ಜೂನ್ 19 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಕನ್ನಡಪ್ರಭ, ಮತ್ತು ಸುವರ್ಣನ್ಯೂಸ್ ಸಹಯೋಗದಲ್ಲಿ ಆಯೋಜಿಸಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಕಾರ್ಯಕ್ರಮಕ್ಕೆ ವನ್ಯಜೀವಿ ಸಂರಕ್ಷಣಾ ಅಭಿಯಾನದ ರಾಯಭಾರಿ ಮುಖ್ಯ ಭಾಷಣಕಾರರಾಗಿ ಆಗಮಿಸುವ ಕಾಂತಾರ ಚಿತ್ರದ ನಿರ್ದೇಶಕ ನಾಯಕ ನಟ ರಿಷಬ್ ಶೆಟ್ಟಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಕನ್ನಡಪ್ರಭ ಪತ್ರಿಕೆಯ ವರದಿಗಾರರಾದ ಭೀಮಣ್ಣ ಗಜಾಪುರ ರವರು ಪತ್ರಿಕೆ ಪ್ರಕಟಣೆಗೆ ತಿಳಿಸಿದರು.ಅತ್ಯುತ್ತಮ ಅರಣ್ಯ ಸ್ನೇಹಿ ಗ್ರಾಪಂ ಪ್ರಶಸ್ತಿಗೆ ಗುಡೇಕೋಟೆ ಗ್ರಾಪಂ ಆಯ್ಕೆಯಾಗಿದ್ದು, ಅತ್ಯುತ್ತಮ ಅರಣ್ಯ ಸ್ನೇಹಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ,ಡಾ.ಎನ್.ಟಿ.ಶ್ರೀನಿವಾಸ್.ಉದ್ಘಾಟಕರಾಗಿ ಆಗಮಿಸಲಿದ್ದು ರಾಯಭಾರಿಯ ಭಾಷಣಕಾರರಾಗಿ ನಟ ರಿಷಬ್ ಶೆಟ್ಟಿ.ವಿಶೇಷ ಅತಿಥಿಗಳಾಗಿ ಬಳ್ಳಾರಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಹೀರಲಾಲ್.ಗೌರವ ಉಪಸ್ಥಿತಿ ವಿಜಯನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರಸಾಳನ್.ಪ್ರಶಸ್ತಿ ಸ್ವೀಕಾರ ಮತ್ತು ಅಧ್ಯಕ್ಷತೆ ಗ್ರಾಪಂ ಅಧ್ಯಕ್ಷೆ ಲಲಿತಮ್ಮ ಗೋವಿಂದಪ್ಪ.ನವರು ಸೇರಿದಂತೆ ಅರಣ್ಯ ಇಲಾಖೆ ಮತ್ತು ಗ್ರಾಪಂ ಸರ್ವ ಸದಸ್ಯರು.ಜನಪ್ರತಿನಿಧಿಗಳು, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಜಿಲ್ಲಾ ವರದಿಗಾರರು:ರಾಘವೇಂದ್ರ.ಸಾಲುಮನಿ. ಕೂಡ್ಲಿಗಿ