ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆ.

ಕೊಟ್ಟೂರು ಅಕ್ಟೋಬರ್.18

ಪಟ್ಟಣದ ತಾಲೂಕು ಕಚೇರಿಯ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯೋತ್ಸವವು ಮೆರವಣಿಗೆ ಮೂಲಕ ಅತ್ಯಂತ ವಿಜೃಂಭಣೆಯಿಂದ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದು ನೂತನ ತಹಸೀಲ್ದಾರ್ ವಿ. ಕಾರ್ತಿಕ್ ರವರು ಮಾತನಾಡಿದರು.ಪಟ್ಟಣದ ಎಲ್ಲ ಸಂಘ ಸಂಸ್ಥೆಗಳ ಹಾಗೂ ಮುಖಂಡರ ಅಭಿಪ್ರಾಯ ಪಡೆದು ನವಂಬರ್ 1 ರಂದು ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ 08 ಘಂಟೆಗೆ ಕನ್ನಡ ಧ್ವಜಾರೋಹಣ ನೆರವೇರಿಸಿ ನಂತರ ತಾಲೂಕು ಕಚೇರಿಯ ಮುಂಭಾಗದಲ್ಲಿ ಬಂದು 8.30ಕ್ಕೆ ಎಲ್ಲರ ಸಮ್ಮುಖದಲ್ಲಿ ಕನ್ನಡ ಧ್ವಜಾರೋಹಣ ಮಾಡಲಾಗುವುದು ಮತ್ತು ಕನ್ನಡ ತಾಯಿ ಭುವನೇಶ್ವರಿ ಭಾವ ಚಿತ್ರದೊಂದಿಗೆಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಮೂಲಕ ಎಪಿಎಂಸಿ ಆವರಣದಲ್ಲಿ ನೆರೆದು ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜ್ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕನ್ನಡಪರ ಹೋರಾಟಗಾರರಿಗೆ ಸನ್ಮಾನವನ್ನು ಮಾಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ವಿಜಯಕುಮಾರ್ ಎ.ಡಿ, ಸುನಿಲ್ ಕುಮಾರ್ ಕೃಷಿ ಇಲಾಖೆ, ಶಿಕ್ಷಣ ಇಲಾಖೆ ಇಸಿಒ ನಿಂಗಪ್ಪ, ಪಟ್ಟಣ ಪಂಚಾಯಿತಿ ಆರ್ ಐ ಕೊಟ್ರೇಶ್, ಅಜ್ಜಪ್ಪ, ಶಶಿಧರ್, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ, ಜೆಸ್ಕಾ ಇಲಾಖೆ, ಮುಂತಾದ ಇಲಾಖೆಯವರು ಇದ್ದರು.

ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button