ಧನ್ನೂರಲ್ಲಿ ಕಾರ್ಮಿಕ ಆಯವ್ಯಯ ತಯಾರಿಕೆ ಅಭಿಯಾನಕ್ಕೆ ಚಾಲನೆ.
ಧನ್ನೂರ ಅಕ್ಟೋಬರ್.19

2023-24ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸುವ ಸಲುವಾಗಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನಕ್ಕೆ ಹುನಗುಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು.ಈ ವೇಳೆ ಮಾತನಾಡಿದ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, 2023-24ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ವೈಯಕ್ತಿಕ ಕಾಮಗಾರಿಗಳ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ, ವೈಯಕ್ತಿಕ ಕಾಮಗಾರಿಗಳ ಹೆಚ್ಚಿನ ಗಮನಹರಿಸಿ ಎಂದು ತಿಳಿಸಿದರು.ಬಳಿಕ ಮಾತನಾಡಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಮರೇಶ್ ಲೋಕಾಪುರ, ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಕಾರ್ಮಿಕರಿಗೆ ಅವಶ್ಯಕತೆ ಇರುವ ಕಾಮಗಾರಿಗಳನ್ನು ಬೇಡಿಕೆ ಡಬ್ಬದಲ್ಲಿ ಹಾಕಿದರೇ ಅಧ್ಯಕ್ಷರು, ಸರ್ವ ಸದಸ್ಯರ ಸಮ್ಮುಖದಲ್ಲಿ ಕ್ರಿಯಾ ಯೋಜನೆಯಲ್ಲಿ ಪಟ್ಟಿ ಮಾಡುತ್ತೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮರೇಶ್ ಲೋಕಾಪುರ , ಉಪಾಧ್ಯಕ್ಷ ಎನ್. ಕೆ ಮುಲ್ಲಾ ಗ್ರಾಪಂ ಸದಸ್ಯರು ಡಾಟಾ ಎಂಟ್ರಿ ಆಪರೇಟರ್ ಸಿದ್ದಣ್ಣ ಗೌಡರ, ಬಿಎಫ್ ಟಿ ಸಂಗಪ್ಪ ಮೇಲಿನಮನಿ, ಕಾಯಕ ಮಿತ್ರ ಆಸ್ಮಾಬೇಗಂ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು ಉಪಸ್ಥಿತರಿದ್ದರು.