ಕಂದಾಯ ಕಚೇರಿಯಲ್ಲಿ ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ ನೀಡಿದ – ಶಾಸಕ ಹಂಪಯ್ಯ ನಾಯಕ.
ಮಾನ್ವಿ ಜ.17

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಕಂದಾಯ ಇಲಾಖೆಯ ಭೂ ಸುರಕ್ಷಾ ಮಹಾತ್ವಾಕಾಂಕ್ಷೆ ಯೋಜನೆಗೆ ಶಾಸಕ ಜಿ.ಹಂಪಯ್ಯ ನಾಯಕ ಚಾಲನೆ ನೀಡಿದರು.
ಶಾಸಕ ಹಂಪಯ್ಯ ನಾಯಕ ಮಾತನಾಡಿ, ದಾಖಲೆಗಳನ್ನು ಗಣಕೀಕೃತ ಮಾಡುವುದರಿಂದ ಸುರಕ್ಷಿತವಾಗಿ ಇಡಬಹುದಾಗಿದ್ದು, ಜನರಿಗೆ ತೊಂದರೆ ಯಾಗದಂತೆ ಕಂದಾಯ ಇಲಾಖೆಯ ದಾಖಲೆಗಳು ಸುಲಭವಾಗಿ ದೊರಕಲಿವೆ ಎಂದರು.
ಕಂದಾಯ ಸಚಿವ ಕೃಷ್ಣಬೈರೇಗೌಡರು ದಾಖಲೆಗಳು ಡಿಜಿಟಲೀಕರಣ ವಾಗಬೇಕು ಎಂದು ಈ ಯೋಜನೆ ಜಾರಿಗೆ ತಂದಿದ್ದಾರೆ. ರೈತರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕೆಂದು ಸಲಹೆ ನೀಡಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದ. ಮಾನ್ವಿ