ವಾಹಿದ್ ಕಡಿವಾಲ ರಾಜ್ಯ ಮಟ್ಟಕ್ಕೆ ಆಯ್ಕೆ.
ಹುನಗುಂದ ನವೆಂಬರ್.20

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಾಹಿದ್ ಕಡಿವಾಲ ಜಿಲ್ಲಾ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗದಗನಲ್ಲಿ ನಡೆಯುವ ರಾಜ್ಯ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.ಇತ್ತೀಚಿಗೆ ಬಾಗಲಕೋಟೆಯ ಶಂಕ್ರಪ್ಪ ಸಕ್ರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ,ಉಪಾಧ್ಯಕ್ಷ ಮಹಾಂತೇಶ ಪರೂತಿ, ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ ಹುನಗುಂದ