ಸದಾಶಿವ ಆಯೋಗದ ವರದಿ ಜಾರಿಗೆ ಮುಖ್ಯಮಂತ್ರಿ ಬಳಿ ಮಾತನಾಡುತ್ತೇನೆ – ಜಿ.ಎಚ್. ಶ್ರೀನಿವಾಸ್.

ತರೀಕೆರೆ ನವೆಂಬರ್.20

ಮಾದಿಗ ಸಮಾಜ ತುಂಬಾ ಹಿಂದುಳಿದಿದೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಎಡಗೈ ಸಮಾಜದವರು ನನಗೆ ಹೆಚ್ಚಿನ ಸಹಕಾರ ನೀಡಿದ್ದೀರಿ ಎಂದು ಶಾಸಕ ಜಿ ಎಚ್ ಶ್ರೀನಿವಾಸ ರವರು ಇಂದು ತರೀಕೆರೆ ಮತ್ತು ಅಜ್ಜಂಪುರ ತಾಲೂಕು ಮಾದಿಗ ಸಮಾಜ ಏರ್ಪಡಿಸಿದ್ದ ಪ್ರತಿಭಟನೆ ಮತ್ತು ಶಾಸಕರ ಕಚೇರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದರು. ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡುತ್ತೇನೆ,ವಿಧಾನ ಕಲಾಪಗಳಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಮಾದಿಗ ಸಮಾಜದ ತಾಲೂಕು ಅಧ್ಯಕ್ಷರಾದ ದೋರನಾಳು ಸುನಿಲ್ ಮಾತನಾಡಿ ಚುನಾವಣಾ ಪೂರ್ವದಲ್ಲಿ ಸಿದ್ದರಾಮಯ್ಯ ರವರು ನಾವು ಸರ್ಕಾರ ರಚಿಸಿದರೆ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಅದರಂತೆ ಕೊಟ್ಟ ಮಾತನ್ನು ಉಳಿಸಿ ಕೊಳ್ಳಬೇಕು ಈ ಕುರಿತು ಶಾಸಕರು ಸರ್ಕಾರಕ್ಕೆ ಮನ ಮುಟ್ಟುವಂತೆ ಮಾತನಾಡಿ ನಿಧಾನ ಕಲಾಪಗಳಲ್ಲಿ ಚರ್ಚಿಸಬೇಕೆಂದು ಆಗ್ರಹಿಸಿದರು. ಡಿಎಸ್ಎಸ್, ತಾಲೂಕು ಸಂಚಾಲಕ ರಾಮಚಂದ್ರ ಮಾತನಾಡಿ ಸಚಿವರಾದ ಕೆ.ಎಚ್. ಮುನಿಯಪ್ಪನವರು ಕರೆ ಕೊಟ್ಟ ಮೇರೆಗೆ ರಾಜ್ಯಾದ್ಯಂತ ಶಾಸಕರ ಮನೆ ಮುತ್ತಿಗೆ ಕಾರ್ಯಕ್ರಮದೊಂದಿಗೆ ಪ್ರತಿಭಟನೆ ಮಾಡುತ್ತಿದ್ದೇವೆ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಮೂಗಿಗೆ ತುಪ್ಪ ಸವರಿದಂತೆ ಮಾಡಿ ದಲಿತರಿಗೆ ನ್ಯಾಯ ಸಿಗಲಿಲ್ಲ, ಆದ್ದರಿಂದ ಸಿದ್ದರಾಮಯ್ಯ ಸರ್ಕಾರ ಎ.ಜೆ ಸದಾಶಿವ ರವರ ಆಯೋಗದ ವರದಿಯನ್ನು ಜಾರಿಗೆ ಮಾಡಬೇಕು ಎಂದು ಹೇಳಿದರು. ಮಾಹಿತಿ ಹಕ್ಕು ಕಾರ್ಯಕರ್ತ ಮಾದಿಗ ಸಮಾಜದ ಮುಖಂಡರಾದ ಮೇಲಕೆರೆ ಓಂಕಾರಪ್ಪ ಮಾತನಾಡಿ ಕಳೆದ 25 ವರ್ಷಗಳಿಂದಲೂ ಸಹ ಜಾತಿ ಜನಸಂಖ್ಯಾ ವಾರು ಮೀಸಲಾತಿ ವರ್ಗೀಕರಣ ಮಾಡಬೇಕು ಎಂದು ಅನೇಕ ಹೋರಾಟಗಳನ್ನು ಮಾಡಿದ್ದರು ಸಹ ಯಾವ ಸರ್ಕಾರಗಳು ನಮಗೆ ನ್ಯಾಯ ಒದಗಿಸಿರುವುದಿಲ್ಲ. ಆದ್ದರಿಂದ ಎ.ಜೆ ಸದಾಶಿವ ರವರ ವರದಿಯನ್ನು ಶಿಫಾರಸ್ಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಜಾರಿ ಗೊಳಿಸಬೇಕು, ಹಾಗೂ ಕಾಂತರಾಜ್ ವರದಿಯನ್ನು ಬಹಿರಂಗಪಡಿಸಬೇಕು. ಪರಿಶಿಷ್ಟ ಜಾತಿ ಎಲ್ಲಾ ನಿಗಮ ಮಂಡಳಿಗಳಿಗೆ ಅನುದಾನ ಹೆಚ್ಚಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ತಾಲೂಕಿನಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಮತ್ತು ಒಳಗುತ್ತಿಗೆ ನೌಕರರನ್ನು ಕಾಯಂ ಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button