ಖಾಲಿ ಇರುವ ಸಂಗೀತ. ಚಿತ್ರಕಲಾ ಮತ್ತು ರಂಗಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಎಂ.ಐ.ಡಿ.ವಾಯ್.ಓ ಯಿಂದ ಪ್ರತಿಭಟನೆ.

ಹೊಸಪೇಟೆ ನವೆಂಬರ್.23

ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂಥ್ ಆರ್ಗನೈಸೇಷನ್ (AIDYO) ವತಿಯಿಂದ ಖಾಲಿ ಇರುವ ಸಂಗೀತ, ಚಿತ್ರಕಲಾ ಮತ್ತು ರಂಗ ಕಲಾ ಶಿಕ್ಷಕರನ್ನು ಕೂಡಲೇ ಭರ್ತಿ ಮಾಡಬೇಕೆಂದು ಸರ್ಕಾರದ ವಿರುದ್ಧ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.ಸಂಘದ ರಾಜ್ಯಾಧ್ಯಕ್ಷ ಮಾತನಾಡಿ ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ ಆಡಳಿತರೂಢ ಸರ್ಕಾರಗಳು ಯಾವುದೇ ಔದ್ಯೋಗಿಕ ನೀತಿಗಳನ್ನು ಜಾರಿಗೆ ತರದಿರುವುದು ವಿಪರ್ಯಾಸದ ಸಂಗತಿಯಾಗಿದೆ, ರಾಜ್ಯದಲ್ಲಿ ಒಟ್ಟು 5,240 ಸರ್ಕಾರಿ ಪ್ರೌಢ ಶಾಲೆಗಳಿವೆ ಅವುಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಬೋಧಕರ ಸಂಖ್ಯೆ 1500 ಇದರಲ್ಲಿ ಅನೇಕರು ನಿವೃತ್ತಿ ಹಂಚಿನಲ್ಲಿದ್ದಾರೆ ಇದರಿಂದಾಗಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಸಹ ಪಠ್ಯ ವಿಷಯಗಳ ಬೋಧನೆಗೆ ಶಿಕ್ಷಕರೇ ಇಲ್ಲದಂತಾಗಿದೆ. ಈ ವಿಷಯಗಳಿಗೆ ಸಂಬಂಧಪಟ್ಟಂತೆ 2008-09 ನೇ ಸಾಲಿನಲ್ಲಿ ಸುಮಾರು 600 ಜನ ಶಿಕ್ಷಕರು ನೇಮಕಾತಿ ಮಾಡಿದ್ದು ಬಿಟ್ಟರೆ ಇದುವರೆಗೆ ಶಿಕ್ಷಕರ ನೇಮಕಾತಿಗಳೇ ಆಗಿಲ್ಲ.ಆದ್ದರಿಂದ ಈ ಅಂಶವನ್ನು ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಬೇಕು ರಾಜ್ಯದಲ್ಲಿ ನಿರುದ್ಯೋಗದ ಬೇಗೆಯಲ್ಲಿ ಬೇಯುತ್ತಿರುವ ಸಂಗೀತ, ಚಿತ್ರಕಲೆ,ದೈಹಿಕ ಮತ್ತು ರಂಗ ಕಲೆಗಳಲ್ಲಿ ಪದವಿ ಪಡೆದವರ ನೇಮಕಾತಿಗಾಗಿ ಕೂಡಲೇ ಅಧಿಸೂಚನೆಯನ್ನು ಹೊರಡಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎ ಐ ಡಿ ವೈ ಸಿ ಸಂಘಟನೆಯ ರಾಜ್ಯಾಧ್ಯಕ್ಷರು ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಪಂಪಾಪತಿ ಜಿಲ್ಲಾ ಕಾರ್ಯದರ್ಶಿ ವಿಜಯನಗರ, ಎರಿಸ್ವಾಮಿ ಜಿಲ್ಲಾ ಉಪಾಧ್ಯಕ್ಷರು ವಿಜಯನಗರ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರ.

ತಾಲೂಕ ವರದಿಗಾರರು:ಮಾಲತೇಶ್.ಶೆಟ್ಟರ್. ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button