ವಿದ್ಯಾರ್ಥಿಗಳಿಂದ ಪ್ರತಿಭಟನೆ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲಿಸಿ ಮತ್ತು ತರಗತಿಗಳನ್ನು ನಡೆಸಲು ಒತ್ತಾಯಿಸಿ.
ಹೊಸಪೇಟೆ ನವೆಂಬರ್.24





ಹೊಸಪೇಟೆ ನಗರದ ಶ್ರೀ ಶಂಕರ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಸರಿಯಾಗಿ ನಡೆಯದೇ ಇರುವ ಕಾರಣ ಮತ್ತು ತಮ್ಮ ಇತರ ಬೇಡಿಕೆಗಳಿಗಾಗಿ ದಿಢೀರ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.ಅದೇ ಸಂದರ್ಭದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಯುತ್ತಿರುವುದರಿಂದ ತಮ್ಮ ತರಗತಿಗಳಿಗೆ ತುಂಬಾ ತೊಂದರೆಯಾಗಿದೆ. ಮತ್ತು ಖಾಯಂ ಅಧ್ಯಾಪಕರು ಇದ್ದರೂ ಸಹ ತರಗತಿಗಳನ್ನು ತೆಗೆದು ಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶವನ್ನು ವ್ಯಕ್ತಪಡಿಸಿದರು. ಇದರ ಜೊತೆಗೆ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯವು ಪದವಿ ವಿದ್ಯಾರ್ಥಿಗಳಿಗೆ ಬೇಕಾ ಬಿಟ್ಟಿಯಾಗಿ ಶುಲ್ಕವನ್ನು ಏರಿಸರುವುದು ಭಾರತ ವಿದ್ಯಾರ್ಥಿ ಫೆಡರೇಷನ್ ಬಲವಾಗಿ ಖಂಡಿಸುತ್ತದೆ.ರಾಜ್ಯದ ಇತರ ಭಾಗಗಳಿಗೆ ಹೋಲಿಕೆ ಮಾಡಿದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣ ಕಲಿಯುವವರ ಸಂಖ್ಯೆ ತುಂಬಾ ವಿರಳ ಸಂಖ್ಯೆ ಆಗಿದ್ದಕ್ಕೆ ಕಾರಣ ಏನೆಂದರೆ ಈ ಭಾಗದ ಜನರ ಆರ್ಥಿಕವಾಗಿ ತುಂಬಾ ಬಡವರು ಇರುತ್ತಾರೆ. ಬಡತನದಿಂದ ಅನೇಕ ವಿದ್ಯಾರ್ಥಿಗಳು ಪದವಿ ಕೋರ್ಸ್‌ನ್ನು ಅರ್ಧಕ್ಕೆ ಬಿಟ್ಟು ಬೆಂಗಳೂರು, ಮಂಗಳೂರು ನಗರಗಳಿಗೆ ದುಡಿಯಲು ಹೋದ ಉದಾಹರಣೆ ಸಾಕಷ್ಟು ಇವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಬರಗಾಲದ ಸಮಯದಲ್ಲಿ ಮನೆಯಲ್ಲಿ ಹಣ ಕೊಡದಿದ್ದರೂ ಓದುಬೇಕೆಂಬ ಹಂಬಲದಿಂದಾಗಿ ವಿದ್ಯಾರ್ಥಿಗಳು ಪದವಿ ಪ್ರವೇಶ ಮಾಡಿಸಿರುತ್ತಾರೆ. ಆದರೆ ಸರ್ಕಾರಿ ಪದವಿ ಕಾಲೇಜುಗಳಿಗೆ ಸೇರಿಕೊಂಡರೆ ಇಲ್ಲಿ ಇತರೆ ಕಾಲೇಜು ಖಾಸಗಿ ಕಾಲೇಜು ಗಳಲ್ಲಿರುವಂತೆ ಅತಿಯಾದ ಶುಲ್ಕವನ್ನು ಭರಿಸಲು ಸಾಧ್ಯವಾಗದ ವಿದ್ಯಾರ್ಥಿಗಳು ತಮ್ಮ ಅಳಲನ್ನು ಮಾನ್ಯ ಶಾಸಕರ ಪುತ್ರರಾದ ಗುರುದತ್ ಅವರ ಬಳಿ ಹೇಳಿಕೊಂಡರು.ಗುರುದತ್ ರವರು ಮಾತನಾಡಿ ಸರ್ಕಾರಕ್ಕೆ ಮತ್ತು ವಿಶ್ವವಿದ್ಯಾಲಯದಲ್ಲಿ ಮಾತನಾಡಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ SFI ಅಧ್ಯಕ್ಷರು ಮುಖಂಡರು ಸದಸ್ಯರುDYFI ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಲೂಕ ವರದಿಗಾರರು:ಮಾಲತೇಶ್.ಶೆಟ್ಟರ್. ಹೊಸಪೇಟೆ