ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ – ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸಿ. ಹೂಲಗೇರಿ.

ಹುನಗುಂದ ನವೆಂಬರ್.28

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು ಮತದಾನದ ಮೂಲಕ ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮುಕ್ತ ಅವಕಾಶಗಳಿದ್ದು ಮತದಾನಕ್ಕೆ ಅರ್ಹ ವಯಸ್ಸಿನ ಎಲ್ಲಾರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಕೊಂಡು ಕಡ್ಡಾಯವಾಗಿ ಮತ ಚಲಾಯಿಸುವುದರ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸಲು ಪ್ರಯತ್ನಿಸಬೇಕು ಎಂದು ಪ್ರಾಚಾರ್ಯ ಶರಣಪ್ಪ ಹೂಲಗೇರಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ಬಾಗಲಕೋಟೆ,ತಾಲೂಕಾ ಆಡಳಿತ ಹುನಗುಂದ ಮತ್ತು ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜಿನ ಮತದಾನಕ್ಕೆ ಅರ್ಹ ವಯಸ್ಸಿನ ಭವಿಷ್ಯದ ಮತದಾರರಾದ ವಿದ್ಯಾರ್ಥಿಗಳು ನಿಗದಿತ ನಮೂನೆಗಳನ್ನು ಭರ್ತಿ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡೆ ಕುರಿತಾಗಿ ತಮ್ಮ ಪಾಲಕರಿಗೆ ತಿಳಿ ಹೇಳುವುದಲ್ಲದೇ ಮುಂಬರುವ ಚುನಾವಣೆಗಳಲ್ಲಿ ಕಡ್ಡಾಯ ಮತದಾನ ಮಾಡುವುದರ ಮೂಲಕ ಮತದಾನದ ಹಕ್ಕನ್ನು ಚಲಾಯಿಸ ಬೇಕೆಂದರು. ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ, ಎಚ್.ಟಿ.ಅಗಸಿಮುಂದಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಲಾಭವನ್ನು ಅರ್ಹ ವಿದ್ಯಾರ್ಥಿಗಳು ಪಡೆದು ಕೊಳ್ಳುವುದರ ಜೊತೆಗೆ ಪಾಲಕರಿಗೂ ಇದರ ಮಹತ್ವ ಕುರಿತು ತಿಳಿಸಿ ಕೊಡಬೇಕೆಂದರು. ಕಂದಾಯ ಇಲಾಖೆಯ ಶಿರಸ್ತೆದಾರ ಎಚ್.ಎಂ.ಶಿವಣಗಿ, ಚುನಾವಣಾ ವಿಭಾಗದ ಸಹಾಯಕ ಸಿ.ಜಿ.ಗೌಡರ, ಕಂದಾಯ ನಿರೀಕ್ಷಕ ಎನ್.ಜೆ.ಹುನಗುಂಡಿ, ಗ್ರಾಮ ಆಡಳಿತಾಧಿಕಾರಿ ಎಸ್.ಆರ್.ಕುಂಬಾರ, ಕಾಲೇಜಿನ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಉಪನ್ಯಾಸಕ ವಿ.ಕೆ.ಶಶಿಮಠ ಸ್ವಾಗತಿಸಿದರು. ಐ.ಎಚ್.ನಾಯಕ ವಂದಿಸಿದರು.

ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ. ಹುನಗುಂದ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button