ಮಾಳೇಹಳ್ಳಿ ಸ.ಹಿ.ಪ್ರಾ ಶಾಲೆಯಲ್ಲಿ ನೂತನ ಎಸ್.ಡಿ.ಎಂ.ಸಿ ರಚನೆ.

ಕಾನಾ ಹೊಸಹಳ್ಳಿ ನವೆಂಬರ್.28

ಸಮೀಪದ ಪೂಜಾರಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮಾಳೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌.ಡಿ.ಎಂ.ಸಿ ಯನ್ನು ಸೋಮವಾರ ರಚಿಸಲಾಯಿತು. ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸುವುದರೊಂದಿಗೆ ಎಲ್ಲರ ಸಹಮತದೊಂದಿಗೆ ಅವಿರೋಧ ಆಯ್ಕೆಯಾದರು. ಈ ವೇಳೆ ಮುಖ್ಯ ಶಿಕ್ಷಕರಾದ ಮಹೇಶ್ ಜೆ ನಿರ್ದೇಶನದಂತೆ ನೂತನ ಅಧ್ಯಕ್ಷರಾಗಿ ಎ.ಕೆ ಮಂಜಪ್ಪ ಹಾಗೂ ಉಪಾಧ್ಯಕ್ಷರಾಗಿ ಚೈತ್ರ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಎ.ಕೆ ಮಂಜಪ್ಪ ಮಾತನಾಡಿ, ಗ್ರಾಮಸ್ಥರ ಹಾಗೂ ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರವೀಂದ್ರ ಹಾಗೂ ಗ್ರಾಮದ ಮುಖಂಡರಾದ ಬಸಪ್ಪ, ಭದ್ರಪ್ಪ, ಜಯ್ಯಪ್ಪ, ಎಂ‌‌.ಟಿ ನಾಗೇಂದ್, ನಾಗೇಶ ಸೇರಿದಂತೆ ಶಾಲೆಯ ಶಿಕ್ಷಕರು, ಎಸ್ಡಿಎಂಸಿಯ ಸರ್ವ ಸದಸ್ಯರು, ಗ್ರಾಮದ ಹಿರಿಯರು, ಯುವಕರು, ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.

ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button