ನಾಯಕನಹಟ್ಟಿ ಪಟ್ಟಣದಲ್ಲಿ ನೂತನ ಬಸ್ಸ್ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ನಾಯಕನಹಟ್ಟಿ ಡಿಸೆಂಬರ್.2

ಇಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಪಟ್ಟಣದಲ್ಲಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು 2023-24ನೇ ಸಾಲಿನ ಮಾನ್ಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ‘ನೂತನ ಬಸ್’ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಪಟ್ಟಣದ ದೇವಸ್ಥಾನ ಮುಂಭಾಗ ಒಳ ಮಠ ಆವರಣದಲ್ಲಿ ನೂತನ ವಾಣಿಜ್ಯ ಮಳಿಗೆಗಳು ಉದ್ಘಾಟನೆ ನೆರವೇರಿಸಿದರು.ಆತ್ಮೀಯ ಸಹೋದರ ಚಳ್ಳಕೆರೆ ಶಾಸಕರಾದ ಟಿ ರಘುಮೂರ್ತಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು