ಪುಸ್ತಕಗಳನ್ನು ಉಚಿತವಾಗಿ ಓದುವುದರ ಜೊತೆ ಡಿಜಿಟಲ್ ಗ್ರಂಥಾಲಯ ಉಪಯೋಗಿಸಿ.
ಕೊಟ್ಟೂರು ಫೆಬ್ರುವರಿ.8





ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಆರ್ ಎಂ ಕೆ ಶಾಲೆಯ ವಿದ್ಯಾರ್ಥಿಗಳು ಶ್ರೀಮತಿ ಆಶಾ ಗುರುಮಾತೆ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಿಕ್ಷಕಿಯರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಲ್ಲಪ್ಪ ಗುಡ್ಲಾನೂರ್ ಶಾಖಾ ಗ್ರಂಥಾಲಯ ಅಧಿಕಾರಿ ಇವರು ಪಠ್ಯ ಪುಸ್ತಕಗಳ ಜೊತೆಗೆ ಪಠ್ಯೇತರ ಪುಸ್ತಕಗಳನ್ನು ಹಾಗೂ ದಿನ ಪತ್ರಿಕೆಗಳನ್ನು ಮತ್ತು ನಿಯತಕಾಲಿಕೆಗಳನ್ನ ಓದಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕವಿಗಳ , ವಿಜ್ಞಾನಿಗಳ , ಯೋಧರ ಇಡೀ ಜಗತ್ತಿನ ಎಲ್ಲಾ ಗಣ್ಯ ವ್ಯಕ್ತಿಗಳ ಜೀವನ ಚರಿತ್ರೆಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಪುಸ್ತಕಗಳನ್ನು ಹಾಗೂ ಸಾಹಿತ್ಯ ,ನಾಟಕ, ಕಥೆ , ಕಾದಂಬರಿ ಆಧ್ಯಾತ್ಮ ಹಾಸ್ಯ ಇತರೆ ಪುಸ್ತಕಗಳನ್ನು ಉಚಿತವಾಗಿ ಓದುವುದರ ಜೊತೆಗೆ ಡಿಜಿಟಲ್ ಗ್ರಂಥಾಲಯವನ್ನು ಉಪಯೋಗಿಸಬಹುದು ಇದು ಸ್ಪರ್ಧಾತ್ಮಕ ಪರೀಕ್ಷಾರ್ಥಗಳಿಗೆ ಡಿಜಿಟಲ್ ಗ್ರಂಥಾಲಯ ಗರಡಿ ಮನೆಯಂತಿದೆ ಎಲ್ಲಾ ವಿದ್ಯಾರ್ಥಿಗಳು ,ಗುರುಗಳು, ಗುರು ಮಾತೆಯರು ಹಾಗೂ ಆಡಳಿತ ಮಂಡಳಿಯವರು ಸದಸ್ಯತ್ವವನ್ನು ಪಡೆದು ಕೊಳ್ಳಬೇಕೆಂದು ಕರೆ ನೀಡಿದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ.ಕೊಟ್ಟೂರು