ಮಾದಕ ವ್ಯಸನದಿಂದ ದೂರವಿರಿ – ಕಡಕಬಾವಿ.
ಇಂಡಿ ಡಿಸೆಂಬರ್.14

ಮಾಧಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಹಾಳು ಮಾಡುವುದಿಲ್ಲ. ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ ಎಂದು ತಹಶೀಲ್ದಾರ ಬಿ.ಎಸ್. ಕಡಕಬಾವಿ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ವಿಜಯಪುರ ತಾಲೂಕು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ನಡೆದ ಗುಲಾಬಿ ಆಂಧೋಲನ ಜಾಗ್ರತಿ ಜಾಥಾ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇಂದಿನ ಶೇ.೭೦ ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ ಮಾರು ಹೋಗುತ್ತಿದ್ದು, ತಮ್ಮ ಜೀವನವನ್ನೇ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ ಎಂದರು.ಮಾಧಕ ವಸ್ತುಗಳ ಸೇವನೆಯಿಂದ ಜೀವನ ಹಾಳಾಗುತ್ತದೆ. ಯುವ ಜನರು ವಿದ್ಯಾರ್ಥಿಗಳು ಸಮುದಾಯ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದ್ದು ಇದರಿಂದ ಮುಕ್ತಿ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದರು. ಟಿಎಚ್‌ಓ ಡಾ. ಅರ್ಚನಾ ಕುಲಕರ್ಣಿ ,ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಾಲೆ, ಕಾಲೇಜು ಸುತ್ತ ಮುತ್ತ ಪಾನ್ ಶಾಪಗಳಿಗೆ ಅಧಿಕಾರಿಗಳಿಂದ ಗುಲಾಬಿ ಹೂವು ನೀಡುವುದರ ಮುಖಾಂತರ ಜಾಗೃತಿ ಜಾಥಾ ಅರಿವು ಮೂಡಿಸಲಾಯಿತು.ಕಾರ‍್ಯಕ್ರಮದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ, ಆಡಳಿತ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ