ಉಲ್ಟಾ ಧ್ವಜ ಹಾರಿಸುವ ಮೂಲಕ ರಾಷ್ಟ್ರ ಧ್ವಜಕ್ಕೆ ಪ್ರಭಾರಿ ಮುಖ್ಯ ಶಿಕ್ಷಕಿ – ಶೋಭಾ ಅಪಮಾನ.
ಮಸ್ಕಿ ಆ.15

ಪಟ್ಟಣದ ಧನಗರ ವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು. ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಶೋಭಾ ಮತ್ತು SDMC ಅಧ್ಯಕ್ಷ ರಾಮಣ್ಣ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣದ ವೇಳೆ ರಾಷ್ಟ್ರ ಧ್ವಜ ತಲೆ ಕೆಳಗಾಗಿ ಹಾರಾಡಿದೆ ಅಲ್ಲದೇ ಧ್ವಜ ಕೆಳಗಡೆ ಬಿದ್ದಿದೆ.

ಈ ಘಟನೆಯ ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿವಾಸಿಗಳು ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿವಾಸಿಗಳು ಪ್ರಶ್ನಿಸುತ್ತಿದ್ದಂತೆಯೇ ಪೇಚಿಗೆ ಸಿಲುಕಿ ಮತ್ತೊಮ್ಮೆ ಧ್ವಜಾರೋಹಣ ನೆರವೇರಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ.