ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರ – ಜೆ.ಪಿ.ಚವಡಿಹಾಳ.
ಅರ್ಜುಣಗಿ ಡಿಸೆಂಬರ್.31

ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರ ಎಂದು ಮುಖ್ಯ ಗುರುಗಳಾದ ಜೆ ಪಿ ಚವಡಿಹಾಳ ಹೇಳಿದರು.ಇಂಡಿ ತಾಲೂಕಿನ ಅರ್ಜುಣಗಿ ಕೆಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ನಿಮಿತ್ಯ ವಿಶ್ವ ಮಾನವ ದಿನಾಚಾರಣೆಗೆ ಚಾಲನೆ ನೀಡಿ ಮಾತನಾಡಿದ ಅವರು ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟು ಕೊಳ್ಳಬೇಕು. ಮನುಷ್ಯನಿಗೆ ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎಂಬುದನ್ನು ತಮ್ಮ ಕಾವ್ಯಗಳ ಮೂಲಕ ರಾಷ್ಟ್ರಕವಿ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ಹೇಳಿದರು. ಬಿ ಎಸ್ ಹೊಸೂರ ಶಿಕ್ಷಕರು ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಕುವೆಂಪು ರಚಿಸಿದ ಕಾವ್ಯಗಳ ಮೂಲಕ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಇದ್ದರು.
ಜಿಲ್ಲಾ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ