ವಿಜ್ರಂಭಣೆಯಿಂದ ಸೊನ್ನೆ ಮರಡಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ.
ಹುಲಿಕೆರೆ ಜನೇವರಿ.4

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೆರೆ ಹೊರವಲಯದ ಹೊನ್ನಮರಡಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.ಶ್ರೀ ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿಗೆ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಯಿತು.ಸ್ವಾಮಿಯ ರಥದ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ ಬಾಳೆಹಣ್ಣು. ಉತ್ತುತ್ತಿ .ಮಂಡಕ್ಕಿ .ಎಸೆದು ಭಕ್ತಿ ಸಮರ್ಪಿಸಿದರು.ಶ್ರೀ ಸ್ವಾಮಿಯ ಪಟ್ಟವನ್ನು ಹುಲಿಕೆರೆ ಗ್ರಾಮದ ಮಾಜಿ ಸೈನಿಕ ಶಿವಕುಮಾರ್ ಇವರಿಗೆ ರೂಪಾಯಿ 65.000.ಕ್ಕೆ ಪಡೆದು ಕೊಂಡರು. ಇದೇ ಸಂದರ್ಭದಲ್ಲಿ ಹುಲಿಕೆರೆ ಹಿರೇಕುಂಬಳಗುಂಟೆ ದಾಸರು ಬನಹಳ್ಳಿ ಹೊಸಹಳ್ಳಿ ಜಗಳೂರು ಮೊಳಕಲ್ಮುರು ಸೇರಿ ಇತರೆ ಜಿಲ್ಲೆಗಳ ಸುತ್ತಮುತ್ತಲಿನ ಗ್ರಾಮದ ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ