ಪ್ರಬಂಧ ಸ್ಪರ್ಧೆ – ಪೂಜಾ ಪ್ರಥಮ.
ಇಂಡಿ ಜನೇವರಿ.12

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಪೂಜಾ ಸಾರವಾಡ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾಳೆ. ಇತ್ತೀಚಿಗೆ ವಿಜಯಪುರ ಜಿಲ್ಲಾ ಪಂಚಾಯತ ಜಿಲ್ಲಾ ಸ್ವೀಪ್ ಸಮಿತಿ ಏರ್ಪಡಿಸಿದ್ದ 2023-24.ನೇ ಸಾಲಿನ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ನಡೆದ ಕನ್ನಡ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದು ಪ್ರಾಚಾರ್ಯ ಆರ್. ಎಚ್. ರಮೇಶ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಅಭಿವೃದ್ಧಿ ಸಮಿತಿಯು ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ