75ನೇ ಗಣರಾಜ್ಯೋತ್ಸವ ಆಚರಣೆ ನಿಮಿತ್ಯ ಪೂರ್ವಭಾವಿ ಸಭೆ.

ಅಥಣಿ ಜನೇವರಿ.13

“ಜ. 26ರಂದು 75ನೇ ಗಣರಾಜ್ಯೋತ್ಸವ” ಆಚರಣೆ ಅಂಗವಾಗಿ ಪಟ್ಟಣದ ತಾ.ಪಂ. ಸಭಾಭವನದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ. ಸಂ. ಸವದಿಯವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಲಕ್ಷ್ಮಣ. ಸಂ. ಸವದಿಯವರು, ಗಣರಾಜ್ಯೋತ್ಸವವನ್ನು ತಾಲೂಕಿನ ಜನತೆ ಸಂಭ್ರಮದೊಂದಿಗೆ ಅರ್ಥ ಪೂರ್ಣವಾಗಿ ಆಚರಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು, ನೌಕರರು, ಸಿಬ್ಬಂದಿ ತಪ್ಪದೇ ಪಾಲ್ಗೊಳ್ಳಬೇಕು.

ಗಣರಾಜ್ಯೋತ್ಸವದ ಆಚರಣೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಗಣರಾಜ್ಯೋತ್ಸವದ ಆಚರಣೆ ಅಂಗವಾಗಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತೆ ಕುರಿತು ಚರ್ಚಿಸಲಾಯಿತು. ತಹಸೀಲ್ದಾರ್ ವಾಣಿ ಯು., ತಾ.ಪಂ. ಇ.ಒ. ಶಿವಾನಂದ ಕಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮೊರಟಗಿ ಸೇರಿದಂತೆ ತಾಲೂಕಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಥಣಿ ಶಾಖೆಯ ಕೊ-ಆಪ್ -ಸೊಸೈಟಿಯ 2024ರ ನೂತನ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆಗೊಳಿಸಲಾಯಿತು. ರಾಜ್ಯ ಸರ್ಕಾರಿ ನೌಕರರ ಸಂಘದ ಅಥಣಿ ತಾಲೂಕಾಧ್ಯಕ್ಷರಾದ ಶ್ರೀ ಆರ್.ಎಸ್. ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button