ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಮೈಗೂಡಿಸಿ ಕೊಂಡು ನಿಮ್ಮ ಭವಿಷ್ಯ ರೂಪಿಸಿ ಕೊಳ್ಳಿ – ಪ್ರಾಚಾರ್ಯ ವಿಲಾಸ್ ಕಾಂಬಳೆ.
ಅಥಣಿ ಜನೇವರಿ.13

ವಿದ್ಯಾರ್ಥಿಗಳೇ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಮೈಗೂಡಿಸಿ ಕೊಂಡು ನಿಮ್ಮ ಉಜ್ವಲ ಭವಿಷ್ಯ ರೂಪಿಸಿ ಕೊಳ್ಳಿ ಎಂದು ಪ್ರಾಚಾರ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀ ವಿಲಾಸ್ ಎನ್ ಕಾಂಬಳೆ ಸಲಹೆ ನೀಡಿದರು. ಅಥಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಆಚರಿಸಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಮಕೃಷ್ಣ ಪರಮಹಂಸರಂತಹ ಗುರುಗಳನ್ನು ಪಡೆದು ಗುರುಗಳಲ್ಲಿ ದೇವರನ್ನು ಕಂಡವರು ಸ್ವಾಮಿ ವಿವೇಕಾನಂದರು ಎಂದು ಹೇಳಿದರು. ಹಿರಿಯ ಪ್ರಾಧ್ಯಾಪಕರಾದ ಡಾ. ಶಾಂತಿನಾಥ ಬಳೋಜರವರು ಮಾತನಾಡುತ್ತಾ ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಸರ್ವಧರ್ಮ ಸಮ್ಮೇಳನದ ಭಾಷಣವನ್ನು ಕೇಳಿ ಮಂತ್ರ ಮುಗ್ಧರಾಗಿ, ಸಿಸ್ಟರ್ ನಿವೇದಿತಾ ರಂತಹ ಅನೇಕ ಅನುಯಾಯಿಗಳು ಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತಗಳನ್ನು ಪ್ರಚಾರ ಮಾಡಿದ್ದಾರೆ ಎಂದು ಹೇಳಿದರು. ಉಪನ್ಯಾಸಕರಾದ ಡಾ. ಮಹಾಂತೇಶ ಉಕ್ಕಲಿ ಅವರು ಮಾತನಾಡುತ್ತಾ ಸ್ವಾಮಿ ವಿವೇಕಾನಂದರ ಬಗ್ಗೆ ಹೇಳುತ್ತಾ ಹೋದರೆ, ಹೇಳುವವರೆಗೂ ಮತ್ತು ಕೇಳುವವರೆಗೂ ಇಂದಿಗೂ ಮೈ ರೋಮಾಂಚನ ವಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ವಾಮಿ ವಿವೇಕಾನಂದರ ಬಗ್ಗೆ ತಮಗೆ ತಿಳಿದಿರುವ ವಿಚಾರಗಳನ್ನು ಹಂಚಿ ಕೊಂಡರು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ