ರಾಜ್ಯದಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ – ಪಟ್ಟಣ ಪಂಚಾಯಿತಿಯಲ್ಲಿ ಮುಂದುವರಿಕೆ.
ಕಂಕನವಾಡಿ ಮೇ.30

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಂಕನವಾಡಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ನೌಕರರ ಮುಷ್ಕರ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪೌರ ನೌಕರರ “ನಮ್ಮ ಕಷ್ಟವನ್ನು ಕೇಳುವವರು ಯಾರು” ‘ಪೌರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ’1) ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರ ದೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

2) ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸಿತ್ತಿರುವ ನೀರು ಸರಬರಾಜು ಚಾಲಕರು & ಲೋರ್ಡಸ್ ಕ್ಲೀನರ್ಸ್ ಗಾರ್ಡಿನರ್ ಸ್ಯಾನಿಟರಿ ಸುಪರವೈಜರ್ ಕಂಪ್ಯೂಟರ್ ಆಪರೇಟರ್ ಯು.ಜಿ.ಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರ ಗುತ್ತಿಗೆ ಕಾರ್ಮಿಕರನ್ನು ನೇರ ನಗರ ಸ್ಥಳೀಯ ಸಂಸ್ಥೆಗಳಿಂದ ನೇರ ಪಾವತಿಗೆ ಒಳಪಡಿಸುವುದು.3) ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು.

4) ಎಲ್ಲಾ ನೌಕರರಿಗೆ ಎಸ್.ಎಫ್.ಸಿ ಮುಕ್ತ ನಿಧಿಯಿಂದ ವೇತನ ನೀಡುವುದು. ಎಂದು ಅಳಲು ತೋಡಿಕೊಂಡರು ಆನಂತರ ವಿವಿಧ ಸಂಘಟನೆಯವರು ಸೇರಿ ಸರ್ಕಾರಕ್ಕೆ ಸತ್ಯಪ್ಪ. ಜಂಬಿಗಿ ಇವರ ಮುಖಾಂತರ ಮನವಿ ಸಲ್ಲಿಸಲಾಯಿತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಸಂತೋಷ್.ಕೆಳಗಡೆ.ಮೂಡಲಗಿ