ಎನ್.ಎಸ್.ಯು.ಐ ಯಿಂದ ಜಿಲ್ಲಾ ಮಟ್ಟದ ರಸ ಪ್ರಶ್ನೆ ಕಾರ್ಯಕ್ರಮ.
ಕೂಡ್ಲಿಗಿ ಜನೇವರಿ.8

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಿಂದ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಎನ್‍ಎಸ್‍ಯುಐ ತಾಲ್ಲೂಕು ಅಧ್ಯಕ್ಷ ಮನೋಜ್ ಹೆಗ್ಗಡೆ ತಿಳಿಸಿದರು.ಭಾನುವಾರ ರಂದು ನಡೆಸಿದ ಪತ್ರಿಕಾ ಗೋಷ್ಠಿಯನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ವಿಚಾರ ಧಾರೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಿ ಗೊಳಿಸುವ ಅಂಗವಾಗಿ ಅಖಂಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ರಸ ಪ್ರಶ್ನೆ ಕಾರ್ಯಕ್ರಮವನ್ನು ಎನ್‍ಎಸ್‍ಯುಐ ಜಿಲ್ಲಾ ಘಟಕದಿಂದ ನಡೆಸಲಾಗುತ್ತಿದೆ.

ಬಳ್ಳಾರಿಯ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಜ.12 ರಂದು ನಡೆಯಲಿರುವ ಸ್ಪರ್ಧೆಯಲ್ಲಿ ಪಿಯುಸಿ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಭಾಗಿಯಾಗ ಬಹುದಾಗಿದ್ದು, ತಾಲೂಕಿನ ವಿದ್ಯಾರ್ಥಿಗಳು ಸಂಖ್ಯೆಯಲ್ಲಿ ಹೆಚ್ಚಿನ ಭಾಗಿ ಯಾಗುವಂತೆ ಮನವಿ ಮಾಡಿದರು.ಹೆಸರನ್ನು ನೋಂದಾಯಿಸಿ ಕೊಳ್ಳಲು 97432268884, 9742242248 ಪೋನ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9731262026 ಸಂಪರ್ಕಿಸಬಹುದು.ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಚೇತನ್, ಅಂಜಿನಿ, ಎಸ್ಸಿ ಮೋರ್ಚಾದ ಬ್ಲಾಕ್ ಅಧ್ಯಕ್ಷ ನಾಗರಾಜ, ಕೆಪಿವೈಸಿ ಸಮಾಜಿಕ ಜಾಲತಾಣಾದ ರುದ್ರಮುನಿ, ಡಿಎಸ್ ಎಸ್ ತಾಲ್ಲೂಕು ಸಂಚಾಲಕ ಎಚ್. ವೆಂಕಟೇಶ್, ಬಡೇಲಡಕು ಶಿವರಾಜ್, ಶರತ್ ದೊಡ್ಡಮನಿ ಭಾಗಿಯಾಗಿದ್ದರು.
ಜಿಲ್ಲಾ ವರದಿಗಾರರು:ರಾಘವೇಂದ್ರ.ಬಿ.ಸಾಲುಮನೆಕೂಡ್ಲಿಗಿ