ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ.

ಹೂಡೇಂ ಜನೇವರಿ.24

ಕಾನ ಹೊಸಹಳ್ಳಿ ಹೋಬಳಿ ಸಮೀಪದ ಹೂಡೇಂ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರ, ಗ್ರಂಥಾಲಯ ಮಾಹಿತಿ ಕೇಂದ್ರದ ವತಿಯಿಂದ ವಿಶೇಷ ಮಕ್ಕಳ ಗ್ರಾಮ ಸಭೆ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಗ್ರಾ.ಪಂ ಅಧ್ಯಕ್ಷರು ಬಿ ರಾಮಚಂದ್ರಪ್ಪ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಿದರು. ಈ ವೇಳೆ ಗ್ರಂಥಾಲಯ ಮೇಲ್ವಿಚಾರಕರಾದ ತುಡುಮ ಗುರುರಾಜ್ ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿ ಸರ್ಕಾರ ಆದೇಶದಂತೆ ವಿಶೇಷ ಮಕ್ಕಳ ಗ್ರಾಮ ಸಭೆ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ತಾಯಕನಹಳ್ಳಿ ಶಾಲೆಯ ಮುಖ್ಯ ಗುರುಗಳು ನಿಂಗಪ್ಪ ಮಾತನಾಡಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಮಕ್ಕಳೊಂದಿಗೆ ಮನವಿ ಸಲ್ಲಿಸಿದರು. ನಡುಲಾಹಟ್ಟಿ ರವಿ ಸರ್ ಮಾತನಾಡಿ ಶಾಲೆಗೆ ಕಾಂಪೌಂಡ್ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಮಕ್ಕಳೊಂದಿಗೆ ಮನವಿ ಪತ್ರ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳು ಚಂದ್ರಪ್ಪ, ಶಾಲೆಯ ಮುಖ್ಯ ಗುರುಗಳು ನರಸಿಂಹ ರೆಡ್ಡಿ, ಅಂಗನವಾಡಿ ಮೇಲ್ವಿಚಾರಕರು ಅನುಪಮಾ, ಮುಖಂಡರು ಕೋಣರ ಮಲ್ಲಿಕಾರ್ಜುನ, ಕಳ್ಳಯ್ಯನವರ ಮಲ್ಲಿಕಾರ್ಜುನ, ಚಿತ್ತಯ್ಯ, ಗದಿಸ್ವಾಮಿ, ಆಶಾ ಕಾರ್ಯಕರ್ತೆಯರು ,ಸ್ವಸಹಾಯ ಸಂಘದ ಸದಸ್ಯರು , ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button