ಯುವ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು – ಅಮರೇಶ.ಜಿ.ಕೆ. ತಹಶೀಲ್ದಾರರು
ಕೊಟ್ಟೂರು(25/01/2024):
ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ‘ರಾಷ್ಟ್ರೀಯ ಮತದಾರರ ದಿನ’ ಕಾರ್ಯಕ್ರಮದಲ್ಲಿ ಭಾರತೀಯ ಚುನಾವಣಾ ಆಯೋಗವು 1950 ಜನವರಿ-25 ರಂದು ಅಸ್ತಿತ್ವಕ್ಕೆ ಬಂದಿದೆ.ಈ ಸಂಸ್ಥಾಪನಾ ದಿನದ ನೆನಪಿಗಾಗಿ ಹಾಗೂ ಯುವ ಮತದಾರರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಉತ್ತೇಜಿಸುವ ಉದ್ದೇಶದಿಂದ 2011 ರಿಂದ ಜನವರಿ-25ನೇ ದಿನವನ್ನು “ರಾಷ್ಟ್ರೀಯ ಮತದಾರರ ದಿನ”ವನ್ನಾಗಿ ಆಚರಿಸಲಾಗುತ್ತಿದೆ.
ಮತದಾರರ ವಯಸ್ಸು 21 ವರ್ಷ ಇದ್ದುದನ್ನು ನಂತರ 18 ವರ್ಷಕ್ಕೆ ಇಳಿಸಲಾಗಿರುತ್ತದೆ. ಅರ್ಹತೆ ಹೊಂದಿದ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದೆ. ಪ್ರತಿಯೊಬ್ಬ ಪ್ರಜೆಗೂ ಮತದಾನದ ಮೂಲಭೂತ ಹಕ್ಕಾಗಿದ್ದು,ಯುವ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಸುಭದ್ರ ಆಡಳಿತಕ್ಕೆ ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ಉಳಿದವರಿಗೂ ಮತದಾನದ ಮಹತ್ವವನ್ನು ತಿಳಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೆಪಿಸಬೇಕು.
ಯುವಕ/ಯುವತಿಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆಗೆ ತರಲಾಗಿದೆ ಎಂದು ಈ ದಿನದ ಮಹತ್ವವನ್ನು ತಿಳಿಸಿದ ಅಮರೇಶ.ಜಿ.ಕೆ ತಹಶೀಲ್ದಾರರು ಯುವ ಮತದಾರರಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. “ಪ್ರಜಾ ಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು,ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುವ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇನೆ” ಎಂದು ಯುವ ಮತದಾರರು ಪ್ರತಿಜ್ಞೆಯನ್ನು ಮಾಡಿದರು. ಬಿ.ದುರುಗಪ್ಪ ಉಪನ್ಯಾಸಕರು ಮತದಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿಜಯಕುಮಾರ ಎಡಿ ನರೇಗಾ, ಉಪಪ್ರಾಚಾರ್ಯರಾದ ಬಸವರಾಜ ಸಿ, ಶಿಕ್ಷಣ ಇಲಾಖೆಯ ಇಸಿಒ ನಿಂಗಪ್ಪ, ಅಜ್ಜಪ್ಪ ಸಿ, ಸ್ವೀಪ್ ನೋಡಲ್ ಅಧಿಕಾರಿಗಳಾದ ಜಿ ಬಾಲಚಂದ್ರ,ಹಳ್ಳಿ ಆನಂದ, ಚುನಾವಣೆ ವಿಷಯ ನಿರ್ವಾಹಕರಾದ ಡಿ ಶಿವಕುಮಾರ ಹಾಗೂ ಇತರರು ಇದ್ದರು.
‘ಮತದಾರರ ದಿನಾಚರಣೆ ಹಾಗೂ ಮತದಾನದ ಮಹತ್ವದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಬಿತ್ತಿಪತ್ರ(ಸ್ಲೋಗನ್)ಗಳನ್ನು ರಚಿಸುವ ಸ್ಪರ್ಧೆಯಲ್ಲಿ ವಿಚೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ
ಕೊಟ್ಟೂರು