ಕೂಡ್ಲಿಗಿ: ಅಂತರ್ ರಾಷ್ಟ್ರೀಯ ಮತದಾರರ ದಿನಾಚರಣೆ.
ಕೂಡ್ಲಿಗಿ ಜನೇವರಿ.26

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ ಕಾನೂನು ಸೇವಾ ಸಮಿತಿ, ನ್ಯಾಯಾಲಯ ಇಲಾಖೆ, ವಕೀಲರ ಸಂಘ. ಚುನಾವಣಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ. ಅಂತರ್ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ, ಜಾಗೃತಿ ಜಾಥಾ ಹಾಗೂ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಲದ ಆವರಣದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜಿ.ಯೋಗೇಶ ರವರು, ಜಾಗೃತಿ ಜಾಥಕ್ಕೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಇದಕ್ಕೂ ಮುನ್ನ ಅವರು ಮತದಾನದ ಕುರಿತು, ಪ್ರಮಾಣ ವಚನ ಬೋಧಿಸಿದರು. ತಹಶಿಲ್ದಾರರಾದ ಎಮ್.ರೇಣುಕಮ್ಮರವರು, ಚುನಾವಣಾ ಇಲಾಖೆ ಅಧಿಕಾರಿ ಸೇರಿದಂತೆ. ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಥಾದಲ್ಲಿ ಭಾಗಿಯಾಗಿದ್ದರು. ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ ಸೇರಿದಂತೆ, ಹಿರಿಯ ವಕೀಲರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ರಾಘವೇಂದ್ರ.ಸಾಲುಮನೆ. ಕೂಡ್ಲಿಗಿ