ಮೊಳಕಾಲ್ಮುರು ಪಟ್ಟಣದ ಬಯಲು ರಂಗಮಂದಿರ ಆವರಣದಲ್ಲಿ 75.ನೇ ಗಣರಾಜ್ಯೋತ್ಸವ ಆಚರಣೆ.
ಮೊಳಕಾಲ್ಮುರು ಜನೇವರಿ.26

ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ತಾಲೂಕಾ ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಪ್ರತಿ ವರ್ಷ ಜನೇವರಿ 26.ರಂದು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತೇವೆ. ಈ ದಿನ ನಾವೆಲ್ಲಾ ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಹಾಗೂ ನಮ್ಮ ಮಕ್ಕಳಿಗೆ ಭಾರತದ ಇತಿಹಾಸ, ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಸಿ ಕೊಡಬೇಕು, ಆಗ ನಮ್ಮಲ್ಲಿ ದೇಶ ಪ್ರೇಮದ ಕಿಚ್ಚು ಹೆಚ್ಚುವುದು ಎಂದು ತಿಳಿಸಿದರು.ತಾಲೂಕು ದಂಡಾಧಿಕಾರಿಗಳಾದ ಶ್ರೀಮತಿ ರೂಪ, ತಾಲೂಕಾ ಪಂಚಾಯತಿ ಇ ಓ ಪ್ರಕಾಶ್, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಟ್ಟಣ ಪಂಚಾಯತ್ ಸದಸ್ಯರು ಮುಖಂಡರು, ವಿವಿಧ ಸಂಘಟನೆಗಳ ಮುಖ್ಯಸ್ಥರು, ನೆಚ್ಚಿನ ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು