ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ – ಹುಟ್ಟು ಹಬ್ಬ ಆಚರಣೆ.
ಮಾನ್ವಿ ಡಿ .16

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಾನ್ವಿಯಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಜನರಿಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದೆ ರೀತಿಯಲ್ಲಿ ರೈತರಿಗೆ ಸಾಲ ಮನ್ನಾ ಮಾಡಿದ ಹೆಗ್ಗಳಿಕೆ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದರು.ಕುಮಾರಸ್ವಾಮಿ ಅವರಿಗೆ ಆ ದೇವರು ಆಯಸ್ಸು ಆರೋಗ್ಯ ನೀಡಲಿ ಎಂಬ ಕಾರಣಕ್ಕಾಗಿ ರೋಗಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ