ಜಿ.ಎಚ್.ಶ್ರೀನಿವಾಸ್ ಗೆ ಸಚಿವ ಸ್ಥಾನಕ್ಕೆ ಕ.ದ.ಸಂ.ಸ.ಮನವಿ ….
ತರೀಕೆರೆ (ಮೇ.18) :

ಮತಕ್ಷೇತ್ರದ ಎಲ್ಲಾ ಜಾತಿ ಧರ್ಮದವರ ಪ್ರೀತಿ ವಿಶ್ವಾಸ ಗಳಿಸಿ ಜಿಲ್ಲೆಯಲ್ಲಿ ಎರಡನೇ ಬಾರಿ ಕಾಂಗ್ರೆಸ್ ಪಕ್ಷದಿಂದ ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಿರುವ ಜಿ.ಎಚ್. ಶ್ರೀನಿವಾಸ್. ರವರಿಗೆ ಸಚಿವ ಸ್ಥಾನ ನೀಡಬೇಕೆಂದು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ, ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮತ್ತು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ ಕೆ ಶಿವಕುಮಾರ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ತರೀಕೆರೆ ಮತಕ್ಷೇತ್ರವು ಕಳೆದ 24 ವರ್ಷಗಳಿಂದ ಸಚಿವ ಸ್ಥಾನದಿಂದ ವಂಚಿತವಾಗಿದೆ ಆದ್ದರಿಂದ ತರೀಕೆರೆ ಮತಕ್ಷೇತ್ರದ ಶಾಸಕರಾದ ಜಿ.ಎಚ್. ಶ್ರೀನಿವಾಸ್ ರವರನ್ನು ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮನವಿ ಮೂಲಕ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಎನ್. ಹೆಚ್. ಬಸವರಾಜ್, ತಾಲೂಕು ಸಂಘಟನಾ ಸಂಚಾಲಕರಾದ ಬಿ. ಕೃಷ್ಣ. ನಾಯ್ಕ್ ರಂಗೇನಹಳ್ಳಿ ಗ್ರಾಮ ಸಂಚಾಲಕರಾದ ರಮೇಶ್ ಹಾಗೂ ಕ ದ ಸಂ ಸ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು: ಎನ್.ವೆಂಕಟೇಶ್.ತರೀಕೆರೆ …