ಸಂಗಮನಾಥನ ದರ್ಶನ ಪಡೆದ ಬಾಗಲಕೋಟೆ ಜಿಪಂ. ಸಿಇಓ.
ಕೂಡಲ ಸಂಗಮ ಫೆಬ್ರುವರಿ.17

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶ್ರೀ ಸಂಗಮನಾಥನ ದರ್ಶನವನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ್ ಕುರೇರ ಪಡೆದರು.ಬಳಿಕ ಸಾಂಸ್ಕೃತಿಕ ನಾಯಕ ಬಸವಣ್ಣನ ಐಕ್ಯತೆ ಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬಳಿಕ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಸಹಾಯಕ ನಿರ್ದೇಶಕ ಮಹಾಂತೇಶ ಕೋಟಿ, ಎಇಇ ಅಧಿಕಾರಿಗಳಾದ ರಾಘವೇಂದ್ರ ಪುರೋಹಿತ, ತಾಂತ್ರಿಕ ಸಂಯೋಜಕ ನವೀನ ಹಂಚಾಟೆ, ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.