ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ…..

ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುವಂತದ್ದು.ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದು. ಶಿವಾಜಿ ಅವರು ತಮ್ಮ ಜೀವಿತಾವಧಿಯಲ್ಲಿ ತನ್ನ ಸಾಮ್ರಾಜ್ಯವನ್ನು ಮೊಘಲರಿಂದ ಕಾಪಾಡಿ ಕೊಳ್ಳಲು ಅನೇಕ ವರ್ಷಗಳ ಕಾಲ ಹೋರಾಡಿದ್ದರು. ಇನ್ನೂ ಕೆಲವರು ಛತ್ರಪತಿ ಶಿವಾಜಿಯನ್ನು ದೇವರೆಂದೇ ಪರಿಗಣಿಸುತ್ತಾರೆ. ದಕ್ಕಿಣ ಭಾರತದಲ್ಲಿ ಇಂದಿಗೂ ಕೂಡ ಪ್ರಾಚೀನ ಹಿಂದೂ ದೇವಾಲಯಗಳು ಅಳಿಯದೇ ಉಳಿದಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಛತ್ರಪತಿ ಶಿವಾಜಿಯ ನ್ಯಾಯಯುತ ಆಡಳಿತವಾಗಿದೆ.ಛತ್ರಪತಿ ಶಿವಾಜಿ ಮಹಾರಾಜರ ಪೂರ್ಣ ಹೆಸರು ಶಿವಾಜಿರಾಜೆ ಶಹಾಜಿರಾಜೆ ಬೋಂಸ್ಲೆ. ಶಿವಾಜಿ ಮಹಾರಾಜರು ಫೆಬ್ರುವರಿ 19, 1630 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿನ ಶಿವನೇರಿ ಎನ್ನುವ ಕೋಟೆಯಲ್ಲಿ ಜನಿಸಿದರು. ಶಿವಾಜಿ ಮಹಾರಾಜರ ಪಟ್ಟಾಭಿಷೇಕವು ಜೂನ್‌ 6, 1674 ರಂದು ನಡೆಯಿತು. ಶಿವಾಜಿ ಮಹಾರಾಜರು ತಮ್ಮ ಆಡಳಿತಾವಧಿಯಲ್ಲಿ ಪಶ್ಚಿಮ ಮಹಾರಾಷ್ಟ್ರದ ಕೊಂಕಣ, ಸಹ್ಯಾದ್ರಿ ಬೆಟ್ಟಗಳಿಂದ ಪಶ್ಚಿಮ ಮಹಾರಾಷ್ಟ್ರದ ದಕ್ಷಿಣ ಭಾರತದ ತಂಜಾವರ್‌ವರೆಗೆ ತನ್ನ ಸಾಮ್ರಾಜ್ಯವನ್ನು ವಿಸ್ತಿರಿಸಿದ್ದರು. ಶಿವಾಜಿ ಮಹಾರಾಜರು ಜೂನ್‌ 6, 1674 ರಿಂದ ಎಪ್ರಿಲ್‌ 3, 1680 ರವರೆಗೆ ಆಳ್ವಿಕೆಯನ್ನು ಮಾಡಿದ್ದರು.ಶಿವಾಜಿ ಮಾಹಾರಾಜರ ಆಳ್ವಿಕೆ ಸಮಯದಲ್ಲಿ ರಾಯಗಢ ಕೋಟೆಯನ್ನು ಇಡೀ ಮಹಾರಾಷ್ಟ್ರದ ರಾಜಧಾನಿಯನ್ನಾಗಿ ಮಾಡಲಾಯಿತು. ಶಿವಾಜಿ ಮಹಾರಾಜರಿಗೆ ಇಬ್ಬರು ಗಂಡು ಮಕ್ಕಳಿದ್ದರು. ಒಂದು ಮಗನ ಹೆಸರು ಸಂಭಾಜಿ ಹಾಗೂ ಇನ್ನೋರ್ವ ಮಗನ ಹೆಸರು ರಾಜರಾಮ್‌. ಶಿವಾಜಿಯವರ ತಂದೆಯ ಹೆಸರು ಶಹಾಜಿರಾಜೆ ಭೋಸ್ಲೆ ಮತ್ತು ಅವರ ತಾಯಿಯ ಹೆಸರು ಜಿಜಾಬಾಯಿ.17.ನೇ ಶತಮಾನದಲ್ಲಿ, ಶಿವಾಜಿ ಪೂರ್ವ ಭಾರತದಲ್ಲಿ ರಾಜ್ಯಭಾರ ಮಾಡುತ್ತಿದ್ದರು. ಅವರ ತಾಯಿ ಜೀಜಾ ಮಾತೆಯು ಶಿವಾಜಿಗೆ ಸಣ್ಣ ವಯಸ್ಸಿನಿಂದಲೂ ನಾಮಜಪವನ್ನು ಮಾಡಿಸುತ್ತಿದ್ದಳು. ಒಬ್ಬ ರಾಜನಿಗೆ ಬೇಕಾದ ಎಲ್ಲ ಯುದ್ಧ ಕಲೆಗಳನ್ನೂ ಜೀಜಾ ಮಾತೆಯು ಶಿವಾಜಿಗೆ ಕಲಿಸಿದ್ದಳು. ಜೀಜಾ ಮಾತೆ ಮತ್ತು ಗುರು ರಾಮದಾಸ ಸ್ವಾಮಿಗಳ ಮಾರ್ಗದರ್ಶನದಲ್ಲಿ ಶಿವಾಜಿಯು ಆದರ್ಶ ರಾಜನಾದನು. ಶಿವಾಜಿಯು ಧೈರ್ಯದಿಂದ ಮರಾಠರನ್ನು ಮೊಗಲರ ವಿರುದ್ಧ ಮುನ್ನಡೆಸಿದನು. ಶಿವಾಜಿಯು ಆದರ್ಶ ರಾಜ್ಯವನ್ನು ಸ್ಥಾಪಿಸಿದನು. ಶಿವಾಜಿಯು ರಾಜ್ಯವನ್ನು ಧೈರ್ಯ,ಸಹನೆ ಮುಂತಾದ ಆಧ್ಯಾತ್ಮಿಕ ಗುಣಗಳ ಬಲದಲ್ಲಿ ಸ್ಥಾಪಿಸಿದ್ದನು.ಶಿವಾಜಿ ಮಹಾರಾಜರು ಎಪ್ರಿಲ್‌ 3, 1680 ರಂದು ರಾಯಗಢ ಕೋಟೆಯಲ್ಲಿ ನಿಧನರಾದರು.

ಭೂಮಿಕಾ ರಂಗಪ್ಪ ದಾಸರಡ್ಡಿ,ಬಿದರಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button