ಸಂವಿಧಾನದ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಲು ಜಾಗೃತಿ ಜಾಥಾ ಕಾರ್ಯಕ್ರಮ.
ಹುಣಶ್ಯಾಳ ಫೆಬ್ರುವರಿ.19

ದೇವರ ಹಿಪ್ಪರಗಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯನ್ನು ಅದ್ದೂರಿ ಯಿಂದ ಸ್ವಾಗತ ಮಾಡಿದ ಗ್ರಾಮಸ್ಥರು, ಸಂವಿಧಾನದ ಬಗ್ಗೆ ಸಾರ್ವಜನಿಕರು ತಿಳಿವಳಿಕೆಯ ಸಲುವಾಗಿ ಭಾರತ ಸರ್ಕಾರದ ವತಿಯಿಂದ ಎಲ್ಲಾ ರಾಜ್ಯಗಳಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಸಂಚರಿಸಿ ಸಂವಿಧಾನ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭೋರಮ್ಮಮೌನೇಶ ಪೂಜಾರಿಯವರು ದೀಪ ಬೆಳಗುವ ಮುಖಾಂತರ ಕಾರ್ಯಕ್ರಮವನ್ನು ಚಾಲನೆ ನೀಡಿದರು, ಮುಖ್ಯ ಅಥಿತಿಗಳಾದ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರಘವೀರ ವರ್ಧಮಾನ ಹಾಗೂ ಎಲ್ಲಾ ಸದಸ್ಯರು, ನೋಡಲ್ ಅಧಿಕಾರಿಗಳಾದ ಪಿ ಆರ್ ಉಮಚಗಿಮಠ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶಿವಲಿಂಗಪ್ಪ ಹಚಡದ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಎಲ್ಲಾ ಶಾಲೆಯ ಶಿಕ್ಷಕರು, ಮಕ್ಕಳು ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಎಲ್ಲಾ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ. ನ್ಯೂಸ್ ಕನ್ನಡ ಚಾನಲ್:ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ