ಫೆಬ್ರುವರಿ 22 ರಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ – ಕಾಶಪ್ಪನವರ ಪ್ರಮಾಣ ವಚನ.

ಹುನಗುಂದ ಫೆಬ್ರುವರಿ.20 :

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾದ ಹುನಗುಂದ ಮತ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಇದೇ ಫೆ.22 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದು.

ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಘಟಕದ ಎಲ್ಲ ಮುಂಚೂಣಿ ಅಧ್ಯಕ್ಷರು,ಸದಸ್ಯರು,ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಕಾಶಪ್ಪನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಪಕ್ಷದ ಮುಖಂಡ ಶಿವಾನಂದ ಕಂಠಿ ಹೇಳಿದರು.
ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಶಾಸಕ ಕಾಶಪ್ಪನವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಸ್ವಾಗತಾರ್ಹವಾದುದು.

DOWNLOAD OUR APP

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದರು.
ಪಿಕೆಪಿಎಸ್ ಅಧ್ಯಕ್ಷ ಹಾಗೂ ಪಕ್ಷದ ಮುಖಂಡ ದೇವು ಡಂಬಳ ಮಾತನಾಡಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನವನ್ನು ನಮ್ಮ ಜಿಲ್ಲೆಯ ನಮ್ಮ ಶಾಸಕರಿಗೆ ಕೊಟ್ಟಿದ್ದು ಸಂತಸ ತಂದಿದೆ.ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಅಭಿನಂದಗಳನ್ನು ಸಲ್ಲಿಸುತ್ತವೆ.ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಪದಗ್ರಹಣ ಸಮಾರಂಭಕ್ಕೆ ಪಕ್ಷದ ಎಲ್ಲ ಚುನಾಯಿತ ಪ್ರತಿನಿಧಿಗಳು ಸೇರಿದ್ದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕ ಪ್ರಚಾರ ಸಮಿತಿ ಅಧ್ಯಕ್ಷ ಮುತ್ತಣ್ಣ ಕಲಗೋಡಿ,ವಿ.ಮ.ಬ್ಯಾಂಕ್ ಅಧ್ಯಕ್ಷ ರವಿ ಹುಚನೂರ,ಮುಖಂಡರಾದ ಸಂಗಣ್ಣ ಗಂಜೀಹಾಳ, ಪುರಸಭೆ ಸದಸ್ಯರಾದ ಬಸವರಾಜ ಗೊಣ್ಣಾಗರ,ಯಲ್ಲಪ್ಪ ನಡುವಿನಮನಿ ಸೇರಿದ್ದಂತೆ ಅನೇಕರು ಇದ್ದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button