ಮಕ್ಕಳಿಗಾಗಿ ಆಸ್ತಿ ಅಂತಸ್ತು ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ – ಜಿ.ಎಸ್. ತಾವರಖೇಡ.
ಅರ್ಜುಣಗಿ ಕೆಡಿ ಫೆಬ್ರುವರಿ.2

ಇಂಡಿ ತಾಲೂಕಿನ ಅರ್ಜುಣಗಿ ಕೆಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮವನ್ನು ನಸ್ರುದ್ದೀನ್ ಮುಲ್ಲಾ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಜಿ ಎಸ್ ತಾವರಖೇಡ ಶಿಕ್ಷಕರು ಮಾತನಾಡಿ ಮಕ್ಕಳಿಗಾಗಿ ಆಸ್ತಿ ಅಂತಸ್ತು ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಹೇಳಿದರು. ನಂತರ ಭೀಮನಗೌಡ ಬಿರಾದಾರ ಮಾತನಾಡಿ ಮಕ್ಕಳಿಗೆ ಗುಣಾತ್ಮಕ ಹಾಗೂ ಸಂಸ್ಕಾರಯುತ ಶಿಕ್ಷಣ ಸಿಗಬೇಕು, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಬಾಲ್ಯದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮ ಶಿಕ್ಷಣ ಪಡೆದು ಗುರಿ ಮುಟ್ಟುವುದು ನೂರಕ್ಕೆ ನೂರು ಸತ್ಯ ಎಂದು ಹೇಳಿದರು. ವೇದಿಕೆಯ ಮೇಲೆ ಗ್ರಾಮದ ಗಣ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೋಡುಗರನ್ನು ರಂಜಿಸಿತು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕರು ಉತ್ತಮವಾಗಿ ನಡೆಸಿ ಕೊಟ್ಟರು.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ.ಹರಿಜನ.ಇಂಡಿ