ಯುವ ಮುಖಂಡ ಬಿ.ಆರ್.ವಿಕ್ರಂ ಪಕ್ಷಕ್ಕೆ ಸೇರ್ಪಡೆ.
ಕೊಟ್ಟೂರು ಫೆಬ್ರುವರಿ.25

ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಗಳನ್ನು ಒಪ್ಪಿಕೊಂಡು ಕೊಟ್ಟೂರಿನ ಯುವ ಮುಖಂಡ ಬಿ.ಆರ್.ವಿಕ್ರಂ ಜಿಲ್ಲಾಧ್ಯಕ್ಷರಾದ ಚನ್ನಬಸವನಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಸೇರ್ಪಡೆಯಾದರು. ಈ ಹಿಂದೆ ಬಿಜೆಪಿಯಲ್ಲಿ ಕೆಲಸ ಮಾಡಿದ ಅನುಭವ ವಿಕ್ರಂ ಅವರಿಗೆ ಇದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ದೂರ ಉಳಿದಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸೇರಿಕೊಳ್ಳುವ ವಿಚಾರವನ್ನು ಪಕ್ಷದ ಕಾರ್ಯಕರ್ತರೊಂದಿಗೆ ಹಂಚಿ ಕೊಂಡಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಬರ ಮಾಡಿಕೊಂಡಿದೆ. ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಅಥವಾ ಯಾವುದೇ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದರೆ ಸ್ವಾಗತ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ ತಿಳಿಸಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎಚ್.ಎಂ. ಸಚಿನ್ ಕುಮಾರ್, ಮಂಡಕ್ಕಿ ಪ್ರಕಾಶ್ ಇದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್.ಕುಮಾರ್.ಸಿ.ಕೊಟ್ಟೂರು