ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಸರ್ವ ರೀತಿಯಲ್ಲಿ ಸಿದ್ದತೆ ಮಾಡಿ ಕೊಂಡಿರುವುದು – ಶಾಸಕ ಡಾ. ಶ್ರೀ ನಿವಾಸ್.ಎನ್.ಟಿ
ಬಣವಿಕಲ್ಲು ಫೆಬ್ರುವರಿ.28

ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜವಾಹರ ನವೋದಯ ವಿದ್ಯಾಲಯ ಹಳೇ ವಿದ್ಯಾರ್ಥಿಗಳ ಸಂಘ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರವನ್ನು ಶಾಸಕರು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರವನ್ನು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸರ್ವ ರೀತಿಯಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈಗಾಗಲೇ ಸಾಕಷ್ಟು ಅನುದಾನ ತಂದು ಹಲವಾರು ಸಕಲ ಸಿದ್ಧತೆಗಳನ್ನು ಮಾಡಿ ಕೊಂಡಿರುವೆ. ನಾನು ಅಧಿಕಾರಕ್ಕೆ ಬರುವ ಮುಂಚೆ ನಮ್ಮ ಕೂಡ್ಲಿಗಿ ಕ್ಷೇತ್ರ ಮತ್ತು ಇನ್ನಿತರ ಪ್ರದೇಶಗಳಲ್ಲಿ ಅಸಂಖ್ಯಾತ ಉಚಿತ ಆರೋಗ್ಯ ಶಿಬಿರಗಳು ಹಮ್ಮಿಕೊಂಡು ಬಡ ಜನರಿಗೆ ಸಾಕಷ್ಟು ಅನುಕೂಲ ಮಾಡಿ ಕೊಟ್ಟಿದ್ದೇನೆ. ಹಳೇ ವಿದ್ಯಾರ್ಥಿಗಳು ಒಂದಲ್ಲಾ ಒಂದು ರೀತಿಯಲ್ಲಿ ಸಮಾಜಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಂಡು ಇತರರಿಗೆ ಮಾದರಿಯಾಗಿ ಒಂದು ಒಳ್ಳೆಯ ಸಂದೇಶ ಕೊಡಲು ಹೊರಟಿರುವುದು ಇದೆ. ನಮ್ಮ ಕ್ಷೇತ್ರದಲ್ಲಿ ನಿಮ್ಮ ಜನಪರವಾದ ಕೆಲಸಗಳನ್ನು ಕಂಡು ಹೆಮ್ಮೆ ಅನಿಸುತ್ತದೆ.
ಹೀಗಾಗಿ ನಾನು ನಿಮ್ಮ ಜನಪರ ಕೆಲಸ ಕಾರ್ಯಗಳ ಪರವಾಗಿ ಕೈ ಜೋಡಿಸುತ್ತೇನೆ ಎಂದೂ ಹೇಳಲು ಇಚ್ಚಿಸುತ್ತೇನೆ ಎಂದೂ ತಿಳಿಸಿದರು. ಬಳಿಕ ಇಲ್ಲಿನ ಶಾಲೆ ಮತ್ತು ವಸತಿ ನಿಲಯವನ್ನು ಪರಿಶೀಲಿಸಿ ಕುಂದು ಕೊರತೆಗಳನ್ನು ಆಲಿಸಿ ಕುಡಿಯುವ ನೀರಿಗಾಗಿ ಸರ್ಕಾರದಿಂದ ಬೋರ್ವೆಲ್ ಹಾಕಿಸಿ ಕೊಡುವೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ರವೀಂದ್ರನಾಥ ಬಾಬು, ವೈದ್ಯರು, ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ