ಇಂಡಿ ಪಟ್ಟಣದ ವಾರ್ಡ್ ನಂ.12 ರಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ.
ಇಂಡಿ ಮಾರ್ಚ್.4

ಪಟ್ಟಣದ ಸಿಂದಗಿ ರಸ್ತೆಯ ಬಸವರಾಜೇಂದ್ರ ನಗರದ ವಾರ್ಡ್ ನಂ.12 ರಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯೆ ಸಂಗೀತಾ ಸುಧೀರ ಕರಕಟ್ಟಿ ಮಗುವಿಗೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪೋಲಿಯೊ ಅಭಿಯಾನದಲ್ಲಿ ಲಸಿಕೆ ಹಾಕಿಸಿ ಭವಿಷ್ಯದ ಮಕ್ಕಳ ಆರೋಗ್ಯದ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು. ಎಸ್‌ಐಟಿಯು ಜಿಲ್ಲಾ ಅಧ್ಯಕ್ಷೆ ಭಾರತಿ ವಾಲಿ, ಆಶಾಕಾರ್ಯಕರ್ತೆ ಗೀತಾ ಹಂಜಗಿ, ಅಂಗನವಾಡಿ ಕಾರ್ಯಕರ್ತೆ ಎಮ್.ಎಸ್.ಕೂಡಿಗನೂರ, ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಎ.ಬೂದಿಹಾಳ ವಾರ್ಡ್ ನಾಗರಿಕರು ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ.ಹರಿಜನ.ಇಂಡಿ