ಗೋರಬಾಳ ಗ್ರಾಮದಲ್ಲಿ ನೂತನ ಗ್ರಂಥಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ – ಶಾಸಕ ವಿಜಯಾನಂದ ಕಾಶಪ್ಪನವರ.
ಗೋರಬಾಳ ಮಾರ್ಚ್.4

ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗೋರಬಾಳ ಗ್ರಾಮದಲ್ಲಿ ತಾಲೂಕಾ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ತಾಲೂಕ ಪಂಚಾಯತ ಕಾರ್ಯಾಲಯ ಇಳಕಲ್, 2022-23 ನೇ. ಸಾಲಿನ ತಾಲೂಕ ಪಂಚಾಯತಿ “ಅನಿರ್ಬಂಧಿತ ಅನುದಾನದಡಿ” ಮಂಜೂರಾದ ಕಾಮಗಾರಿ ಬಾಗಲಕೋಟ ಜಿಲ್ಲೆಯ ಇಳಕಲ್ಲ ತಾಲೂಕಿನ ಗೋರಬಾಳ ಗ್ರಾಮದಲ್ಲಿ 12.00ಲಕ್ಷಗಳು ಅಂದಾಜು ಮೊತ್ತದಲ್ಲಿ ನೂತನ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಯುವಕರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್.ವಾಯ್.ಕಿಳ್ಳಿ.ಇಳಕಲ್ಲ