ಅಮಲಾಪುರ ಶ್ರೀ ಬಸವೇಶ್ವರ ರಥೋತ್ಸವ ಸಂಭ್ರಮ.
ಅಮಲಾಪುರ ಮಾರ್ಚ್.16

ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದ ಶ್ರೀ ಶರಣ ಬಸವೇಶ್ವರ ಸ್ವಾಮಿಯ ರಥೋತ್ಸವವು ನೂರಾರು ಭಕ್ತರ ಹರ್ಷೋದ್ಘಾರ ದೊಂದಿಗೆ ಗುರುವಾರ ಸಂಜೆ ಸಂಭ್ರಮ ಸಡಗರದಿಂದ ನೆರವೇರಿತು. ರಥೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಮಹಾ ರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ ಪೂಜೆ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು, ಸಂಜೆಯಾಗುತ್ತಿದ್ದಂತೆ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು ಕರೆತಂದು ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಯಿತು. ಸ್ವಾಮಿ ರಥವೇರುತ್ತಿದ್ದಂತೆ ನರದಿದ್ದ ಭಕ್ತರು ಜಯ ಘೋಷಣೆ ಮುಳುಗಿಸಿದರು. ರಥ ಮುಂದೆ ಸಾಗುತ್ತಿದ್ದಂತೆ ಉತ್ತತ್ತಿ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ವೇಳೆ ಶ್ರೀ ಬಸವೇಶ್ವರ ಸ್ವಾಮಿಯ ಹೂವಿನ ಹರಾಜಿನಲ್ಲಿ 30101 ರೂ,ಗೆ ಕೆ.ಜಿ ಶ್ರೀನಿವಾಸ್ ಗೌಡ ಹೊಸಹಳ್ಳಿ ಇವರು ಪಡೆದು ಕೊಂಡರು. ಈ ವೇಳೆ ಕೂಡ್ಲಿಗಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ ಪ್ರಶಾಂತಸಾಗರ ಸ್ವಾಮೀಜಿ, ಕೊಟ್ಟೂರಿನ ಹಿರೇಮಠದ ಯೋಗಿ ರಾಜೇಂದ್ರ ಶಿವಾಚಾರ್ಯ, ಕಾನಮಡುಗು ದಾಸೋಹ ಮಠದ ಧರ್ಮಾಧಿಕಾರಿ ದಾ.ಮ ಐಮಡಿ ಶರಣಾರ್ಯರು ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದೆವು. ಈ ರಥೋತ್ಸವಕ್ಕೆ ಜನಪ್ರತಿನಿಧಿಗಳು, ಮುಖಂಡರು, ಗ್ರಾ.ಪಂ ಸದಸ್ಯರು, ಸುತ್ತ ಮುತ್ತಲಿನ ಗ್ರಾಮಸ್ಥರು ಸದ್ಭಕ್ತರು ಭಾಗವಹಿಸಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ