ಸುಪ್ರೀಂಕೋರ್ಟಿನ ಆದೇಶಗಳನ್ನು ಪೋಲಿಸ್ ಸಿಬ್ಬಂದಿ ಅಪ್ಡೇಟ್ ಮಾಡಿಕೊಳ್ಳ ಬೇಕು – ಜಿಲ್ಲಾ ಎಸ್.ಪಿ. ಶ್ರೀ ಹರಿಬಾಬು.

ಹೊಸಪೇಟೆ ಮಾರ್ಚ್.18

ಸುಪ್ರೀಂಕೋರ್ಟಿನ ಮತ್ತು ಹೈಕೋರ್ಟಿನ ಕಾಲ ಕಾಲಕ್ಕೆ ಹೊರಡಿಸುವ ಆದೇಶಗಳನ್ನ ಪ್ರತಿಯೊಬ್ಬ ಪೊಲೀಸ್ ಅಪ್ಡೇಟ್ ಪಡೆದು ಕೊಳ್ಳಬೇಕು ಎಂದು ಜಿಲ್ಲಾ ಎಸ್ಪಿ ಡಾ.ಶ್ರೀಹರಿಬಾಬು ಹೇಳಿದರು.ಅವರು ಹೊಸಪೇಟೆ ನಗರದಲ್ಲಿ ಶನಿವಾರ ಜಿಲ್ಲಾ ಎಸ್ಪಿ ಕಚೇರಿ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಚೈತನ್ಯ ಗ್ರಾಮೀಣಾಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-2015 ತಿದ್ದುಪಡಿ 2021 ಹಾಗೂ Adoption Regulations-2022 ರ) ವಿಷಯಗಳಿಗೆ ಜಿಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲಾ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕಿದೆ ನಮಗೆ ಗೊತ್ತಿಲ್ಲದೇ ಸಮಾಜದಲ್ಲಿ ಬಾಲ್ಯ ವಿವಾಹಗಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತವೆ ಅವುಗಳನ್ನ ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಕರ್ತವ್ಯ ಎಂದು ಕೆಲಸ ಮಾಡಬೇಕಿದೆ.ಮಕ್ಕಳ ಮೇಲೆ ದೌರ್ಜನ್ಯ, ಭಿಕ್ಷಾಟನೆ, ಬಾಲ ಕಾರ್ಮಿಕ ಪದ್ಧತಿ ಸೇರಿದಂತೆ ಹಲವು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕಿದೆ. ಪ್ರತಿಯೊಬ್ಬ ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡುವ ಕಾರ್ಯ ಆಗಬೇಕು. ಇದು ಗ್ರಾಮೀಣಮಟ್ಟದಿಂದ ನಗರ ಪ್ರದೇಶಗಳಲ್ಲೂ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕೆಲಸವಾಗಬೇಕು ಎಂದರು.ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಂಪನ್ಮೂಲ ವ್ಯಕ್ತಿ ತರಬೇತಿದಾರ ರೋಹಿತ್ ಸಿಜೆ ಮಾತನಾಡಿ, ಬಾಲ್ಯ ವಿವಾಹ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕು. ಈ ಕಾಯ್ದೆಯ ಕುರಿತು ಜಾಗೃತಿ ಮೂಡಿಸಬೇಕು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಾನೂನು ರೀತ್ಯ ಕ್ರಮವಹಿಸ ಬೇಕು. ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಪೋಕ್ಸೋ ಕಾಯ್ದೆ-2012 ಅನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ಜೊತೆಗೆ ಈ ಕಾಯ್ದೆ ಅಂಶಗಳನ್ನು ಪ್ರಚಾರ ಪಡಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ ಮಾತನಾಡಿದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಧೀಪ್ ಕುಮಾರ್ ಉಂಕಿ ಪ್ರಸ್ತಾವಿಕ ಮಾತನಾಡಿದರು.ಮುಖ್ಯ ಅತಿಥಿಯಾಗಿ ಹೊಸಪೇಟೆ ಉಪ ವಿಭಾಗದ ಡಿವೈಎಸ್ಪಿ ಶರಣ ಬಸವೇಶ್ವರ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಮಕ್ಕಳ ರಕ್ಷಣಾ ಘಟಕದ ಗಂಗಾಧರ್ ಡಿ, ಶರಣಪ್ಪ, ಶ್ರೀಕಾಂತ, ನಿಂಗರಾಜ ಸಖಿ ಘಟಕದ ಸಿಬ್ಬಂದಿಗಳು ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button