ಸೂಳೇಭಾವಿಯಲ್ಲಿ ರಂಗೋಲಿ ಸ್ಪರ್ಧೆ ಮೂಲಕ ಮತದಾನ ಜಾಗೃತಿ.

ಸೂಳೇಭಾವಿ ಏಪ್ರಿಲ್.02

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮತದಾನ ಜಾಗೃತಿ ಮೂಡಿಸುವ ರಂಗೋಲಿ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಪ್ರಶಸ್ತಿ ಪತ್ರ ನೀಡಿದರು. ಬಳಿಕ ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಸ್ವ ಸಹಾಯ ಸಂಘದ ಮಹಿಳೆಯರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು. ಬಳಿಕ ಅಧಿಕಾರಿಗಳು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಇನ್ನು ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಮೂಲಕ ಕೂಲಿ ಕೆಲಸದಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ಫಾರ್ಮ್ ನಂ 6 ನೀಡಿ, ಉದ್ಯೋಗ ಹಾಜರಾಗುವಂತೆ ತಿಳಿಸಿದರು. ಈ ವೇಳೆ ನಲ್ಲಿ 50 ಜನರಿಗೆ ಉದ್ಯೋಗ ನೀಡುವಂತೆ ಕಾಯಕ ಬಂಧು ಫಾರ್ಮ್ ನಂ 6 ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳೋಳ್ಳಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , ಗ್ರಾಮ ಕಾರ್ಯದರ್ಶಿಗಳು, ಡಾಟಾ ಎಂಟ್ರಿ ಆಪರೇಟರ್ ಸಚಿನ್, ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button