ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಪ್ರಭುಗೌಡ ಲಿಂಗದಳ್ಳಿ ನೇಮಕ.
ದೇವರ ಹಿಪ್ಪರಗಿ ಏಪ್ರಿಲ್.02

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಪ್ರಭುಗೌಡ ಲಿಂಗದಳ್ಳಿ ಯವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಕೆ ಸಿ ವೇಣುಗೋಪಾಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ದೇವರ ಹಿಪ್ಪರಗಿ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥರಾದ ಡಾ,ಪ್ರಭುಗೌಡ ಲಿಂಗದಳ್ಳಿ, ಸಾಕೀನ ಚಬನೂರ ಅವರನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ ಕಾಂಗ್ರೆಸ್ ಪಕ್ಷದ ನಿಯಮಗಳು ತತ್ವ ಸಿದ್ದಾಂತಕ್ಕೆ ನಾವು ಬದ್ಧರಾಗಿ ನಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಗೆಲುವಿಗೆ ಶ್ರಮವಹಿಸುತ್ತವೆ ಎಂದು ತಿಳಿಸಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ