ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ.
ಹೂವಿನಹಳ್ಳಿ ಏಪ್ರಿಲ್.08

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪಿ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದರು.ಈ ವೇಳೆ ಕೂಲಿ ಕಾರ್ಮಿಕರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡಬೇಕು, ಯಾರು ಕೂಡ ಮತದಾನ ದಿಂದ ವಂಚಿತ ರಾಗಬಾರದು ಎಂದು ತಿಳುವಳಿಕೆ ಮೂಡಿಸಿದರು. ಬಳಿಕ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಡಿಯಪ್ಪ ಕೊಳಮಲಿ, ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಂತ್ರಿಕ ಸಹಾಯಕ ಡಿ. ಬಿ ಗೌಡರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಘವೇಂದ್ರ ಹುಣಶ್ಯಾಳ, ಡಾಟಾ ಎಂಟ್ರಿ ಆಪರೇಟರ್ ಅಜಿತ್ ಗಗನದ , ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು ಉಪಸ್ಥಿತರಿದ್ದರು.