ಸಡಗರ ದಿಂದ ಹೊಸಹಳ್ಳಿ ಶ್ರೀ ಆಂಜನೇಯ ರಥೋತ್ಸವ.
ಹೊಸಹಳ್ಳಿ ಏಪ್ರಿಲ್.10
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮದ ಶ್ರೀ ಆಂಜನೇಯ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನ ದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ಸ್ವಾಮಿಯ ರಥ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ. ಬಾಳೆಹಣ್ಣು. ಉತ್ತುತ್ತಿ .ಮಂಡಕ್ಕಿ. ಎಸೆದು ಭಕ್ತಿ ಸಮರ್ಪಿಸಿದರು. ರಥಕ್ಕೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಹೊಸಹಳ್ಳಿ ಗ್ರಾಮದ ದೈವಸ್ಥರು. ಭಕ್ತರು ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.