ಹುಲಿಗಿನಾಳದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ.
ಹುಲಗಿನಾಳ ಏಪ್ರಿಲ್.15

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಗಿನಾಳ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಆಯೋಜಿಸಲಾಗಿತ್ತು.ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು. ಜೊತೆಗೆ ಕೂಲಿ ಗುಳೆ ಹೋಗದಂತೆ ತಡೆಯಲು ನಿಮ್ಮೂರಲ್ಲೇ ನರೇಗಾ ಯೋಜನೆಯಡಿ ಕೂಲಿ ಕೆಲಸ ಸಿಗುತ್ತಿರುವ ಮಾಹಿತಿ ನೀಡಿದರು. ಬಳಿಕ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾ ನಾಯ್ಕ್ ಐಇಸಿ ಸಂಯೋಜಕ ಬಸವರಾಜ ಕೊಪ್ಪದ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್, ಬಿಎಫ್ ಟಿ ಸಂತೋಷ್ ಅಕ್ಕಿ. ಬಿಲ್ ಕಲೆಕ್ಟರ್ ರಾಜು ಬೇವೂರ, ಕಾಯಕ ಬಂಧುಗಳು ಉಪಸ್ಥಿತರಿದ್ದರು.